[t4b-ticker]

ಸುಧಾಮೂರ್ತಿ ಕನ್ನಡದಲ್ಲಿ ಪ್ರಮಾಣವಚನ

Picture of RB NEWS

RB NEWS

Bureau Report

ಇನ್ಫೋಸಿಸ್ ಮುಖ್ಯಸ್ಥ ನಾರಾಯಣ ಮೂರ್ತಿ ಪತ್ನಿ ಇನ್ಫೋಸಿಸ್ ಫೌಂಡೇಷನ್ ಮುಖ್ಯಸ್ಥೆ ಸುಧಾಮೂರ್ತಿ

ನವದೆಹಲಿ : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ರಾಜ್ಯಸಭೆಗೆ ನಾಮನಿರ್ದೇಶನಗೊಂಡಿದ್ದ ಇನ್ಫೋಸಿಸ್ ಮುಖ್ಯಸ್ಥ ನಾರಾಯಣ ಮೂರ್ತಿ ಪತ್ನಿ ಇನ್ಫೋಸಿಸ್ ಫೌಂಡೇಷನ್ ಮುಖ್ಯಸ್ಥೆ ಸುಧಾಮೂರ್ತಿ ಇಂದು ಪ್ರಮಾಣ ವಚನ ಸ್ವೀಕರಿಸಿದರು.

ರಾಜ್ಯಸಭೆ ಅಧ್ಯಕ್ಷ, ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ಪ್ರಮಾಣ ವಚನ ಭೋಧಿಸಿದರು.

ಜಗದೀಪ್ ಧನಕರ್ ಅವರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸುಧಾಮೂರ್ತಿ ಅವರು ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಇನ್ಫೋಸಿಸ್ ಫೌಂಡೇಷನ್ ಸಹ ಸಂಸ್ಥಾಪಕ ನಾರಾಯಣ ಮೂರ್ತಿ ಕೂಡಾ ಭಾಗಿಯಾಗಿದ್ದರು. ಕೇಂದ್ರ ಸಚಿವ ಪಿಯೂಷ್ ಗೋಯಲ್, ನಂದನ್ ನೀಲಕೇಣಿ ಉಪಸ್ಥಿತರಿದ್ದರು.

ಈ ವರ್ಷದ ಅಂತರಾಷ್ಟ್ರೀಯ ಮಹಿಳಾ ದಿನದಂದು ಸಮಾಜಸೇವಕಿ ಸುಧಾಮೂರ್ತಿ ಅವರನ್ನು ರಾಜ್ಯಸಭೆಗೆ ನಾಮ ನಿರ್ದೇಶನ ಮಾಡಲಾಗಿತ್ತು. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದ ನರೇಂದ್ರ ಮೋದಿ, ಭಾರತದ ರಾಷ್ಟ್ರಪತಿಗಳು ಸುಧಾಮೂರ್ತಿ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿರುವುದು ನನಗೆ ಖುಷಿ ತಂದಿದೆ ಎಂದು ಹೇಳಿದ್ದರು

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top