ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳಿಗೆ ಸಹಕರಿಸಿದ
ವಾಮಂಜೂರು ನೌಷಾದ್ ಮೇಲೆ ಹಲ್ಲೆ ಯತ್ನ :
ಮಂಗಳೂರು ಸಬ್ ಜೈಲ್ ನಲ್ಲಿ ಘಟನೆ

ಮಂಗಳೂರು: ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಆರೋಪಿ ನೌಷಾದ್ ಎಂಬಾತನಿಗೆ ನಗರದ ಜೈಲಿನಲ್ಲಿ ಹಲ್ಲೆಗೆ ಯತ್ನಿಸಿದ ಘಟನೆ ಸೋಮವಾರ ನಡೆದಿದೆ ಎಂದು ತಿಳಿದು ಬಂದಿದೆ.






ಆರೋಪಿ ನೌಷಾದ್ ಯಾನೆ ವಾಮಂಜೂರು ನೌಷಾದ್ ಯಾನೆ ಚೊಟ್ಟೆ ನೌಷಾದ್ನನ್ನು ಮಂಗಳೂರು ಜೈಲಿನಿಂದ ಮೈಸೂರು ಜೈಲಿಗೆ ಸ್ಥಳಾಂತರಿಸುವ ವೇಳೆ ಇತರೆ ಕೆಲವು ಕೈದಿಗಳು ಕಲ್ಲು ಮತ್ತಿತರ ವಸ್ತುಗಳನ್ನು ಎಸೆದು ಹಲ್ಲೆಗೆ ಯತ್ನಿಸಿದ್ದಾರೆ ಎಂದು ತಿಳಿದುಬಂದಿದೆ. ತಕ್ಷಣ ಜೈಲಿನ ಸಿಬ್ಬಂದಿಗಳು ಹಲ್ಲೆಯನ್ನು ತಡೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಆರೋಪಿಗಳಿಗೆ ಸಹಕರಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ನೌಷಾದ್ನ ಪೊಲೀಸ್ ಕಸ್ಟಡಿಯು ಇಂದಿಗೆ ಅಂತ್ಯವಾಗಿತ್ತು. ಹಾಗಾಗಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದ ಪೊಲೀಸರು ಮೈಸೂರು ಜೈಲಿಗೆ ಸ್ಥಳಾಂತರಿಸುವ ವೇಳೆ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.
ನೌಷಾದ್ ವಿರುದ್ಧ ಸುರತ್ಕಲ್, ಬಜ್ಜೆ, ಮೂಡುಬಿದಿರೆ, ಮಂಗಳೂರು ಉತ್ತರ, ಬಂಟ್ವಾಳ ಗ್ರಾಮಾಂತರ ಠಾಣೆಗಳಲ್ಲಿ ಕೊಲೆ, ಕೊಲೆಯತ್ನ, ದರೋಡೆಗೆ ಸಂಚು ಸೇರಿ 6 ಪ್ರಕರಣಗಳು ದಾಖಲಾಗಿವೆ.

































