ಸುಹಾಸ್ ಶೆಟ್ಟಿ ಹತ್ಯೆ : 8 ಮಂದಿ ಆರೋಪಿಗಳ ಬಂಧನ

Picture of RB NEWS

RB NEWS

Bureau Report

ಮಂಗಳೂರು: ರೌಡಿಶೀಟರ್, ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಮಂಗಳೂರಿನಲ್ಲಿ ಸುಹಾಸ್ ಶೆಟ್ಟಿ ಕೊಲೆ ಮಾಡಿದ ಬಳಿಕ ಪರಾರಿಯಾಗಿದ್ದ ಹಂತಕರು ಮಂಗಳೂರಿನಲ್ಲಿಯೇ ಅವಿತುಕೊಂಡಿದ್ದರು. ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು 8 ಆರೋಪಿಗಳನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಿದ ಬಳಿಕ ಸುಹಾಸ್ ಶೆಟ್ಟಿ ಕೊಲೆಗೆ ಪ್ರಮುಖ ಕಾರಣ ತಿಳಿದುಬಂದಿದೆ.

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ ಹಿನ್ನಲೆಯಲ್ಲಿ ಇಂದು ಮಂಗಳೂರಿಗೆ ಗೃಹ ಸಚಿವ ಡಾ.ಜಿ. ಪರಮೇಶ್ವ‌ರ್ ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಬಗ್ಗೆ ಪೊಲೀಸರೊಂದಿಗೆ ಸಭೆ ನಡೆಸಿದ್ದಾರೆ.

.

ಬಜ್ಜೆ ಶಾಂತಿಗುಡ್ಡೆ ಪೇಜಾವರ ಗ್ರಾಮದ ನಿವಾಸಿ ಅಬ್ದುಲ್ ನಾಸಿರ್ ಅವರ ಪುತ್ರ ಅಬ್ದುಲ್ ಸಫ್ಘಾನ್ (29) ಈತ ಚಾಲಕನಾಗಿ ದುಡಿಯುತ್ತಿದ್ದ.

ಬಜ್ಜೆ ನಿವಾಸಿ ಅಬೂಬಕ್ಕರ್ ಅವರ ಪುತ್ರ ನಿಯಾಝ್ (28) ಈತ ಮೇಸ್ತ್ರಿ ಹೆಲ್ಪ‌ರ್ ಕೆಲಸ ಮಾಡುತ್ತಿದ್ದ.

ಕೆಂಜಾರು ನಿವಾಸಿ ಅಬ್ದುಲ್ ರಝಾಕ್ ಅವರ ಪುತ್ರ ಮುಹಮ್ಮದ್ ಮುಝಮ್ಮಿಲ್ (32) ಸೌದಿ ಅರೇಬಿಯಾ ದಲ್ಲಿ ಸೇಲ್ಸ್ ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದ ಈತ ಕಳೆದ ನಾಲ್ಕು ತಿಂಗಳ ಹಿಂದೆ ಊರಿಗೆ ಮರಳಿದ್ದಾನೆ.

ಕಳವಾರು ನಿವಾಸಿ ಮುಹಮ್ಮದ್ ಅವರ ಪುತ್ರ ಕಲಂದರ್ ಶಾಫಿ (31) ಈತ ಬೆಂಗಳೂರಿನಲ್ಲಿ ಸೇಲ್ಸ್ ಮ್ಯಾನ್ ಆಗಿ ದುಡಿಯುತ್ತಿದ್ದ.

ಚಿಕ್ಕಮಗಳೂರಿನ ಕಳಸ ನಿವಾಸಿ ರಾಜೇಶ್ ಅವರ ಪುತ್ರ ರಂಜಿತ್ (19) ಈತ ಚಾಲಕನಾಗಿ ದುಡಿಯುತ್ತಿದ್ದ.

ಚಿಕ್ಕಮಗಳೂರಿನ ಕಳಸ ನಿವಾಸಿ ಮಾರಿ ಮುತ್ತು ಅವರ ಪುತ್ರ ನಾಗರಾಜ್ (20) ಈತ ಶಾಮಿಯಾನ ಅಂಗಡಿಯೊಂದರಲ್ಲಿ ಕೆಲಸಕ್ಕಿದ್ದ.

ಜೋಕಟ್ಟೆ ನಿವಾಸಿ ಅಬ್ದುಲ್ ಮಜೀದ್ ಅವರ ಪುತ್ರ ಮುಹಮ್ಮದ್ ರಿಝಾನ್ (28) ಈತ ಸೌದಿ ಅರೇಬಿಯಾದಲ್ಲಿ ಕೆಲಸ ಮಾಡುತ್ತಿದ್ದ.

ಉಮರುಲ್ ಫಾರೂಕ್ ಅವರ ಪುತ್ರ ಆದಿಲ್ ಮೆಹರೂಫ್. ಈತ 2022 ಜು.28ರಂದು ಸುರತ್ಕಲ್ ನಲ್ಲಿ ಕೊಲೆಯಾದ ಫಾಝಿಲ್ ಅವರ ಸಹೋದರ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top