ಸೆ.೧೫ರಂದು ಭುವನೇಂದ್ರ ಕಾಲೇಜಿನಲ್ಲಿ ಅಧ್ಯಾಪಕ ಭೂಷಣ ಪ್ರಶಸ್ತಿ ಪ್ರದಾನ
RB NEWS
Bureau Report
ಸೆ.೧೫ರಂದು ಭುವನೇಂದ್ರ ಕಾಲೇಜಿನಲ್ಲಿ ಅಧ್ಯಾಪಕ ಭೂಷಣ ಪ್ರಶಸ್ತಿ ಪ್ರದಾನ
ಕಾರ್ಕಳ: ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ, ಮಂಗಳೂರು ವಿ.ವಿ. ವಿಭಾಗದ ವತಿಯಿಂದ ಶ್ರೀ ಭುವನೇಂದ್ರ ಕಾಲೇಜಿನ ಸಭಾಂಗಣದಲ್ಲಿ ೨೦೨೪ನೇ ಸಾಲಿನ ಅಧ್ಯಾಪಕ ಭೂಷಣ ಪ್ರಶಸ್ತಿ ಪ್ರದಾನವು ಸೆ.೧೫ರಂದು ಬೆಳಗ್ಗೆ ೧೦.೩೦ ಗಂಟೆಯಿAದ ನಡೆಯಲಿದೆ ಎಂದು ಸ್ವಾಗತ ಸಮಿತಿ ಅಧ್ಯಕ್ಷ ಮೋಹನ ಪಡಿವಾಳ್ ಹೇಳಿದ್ದಾರೆ.
ಅವರು ಭುವನೇಂದ್ರ ಕಾಲೇಜಿನಲ್ಲಿ ಗುರುವಾರ ನಡೆದ ಸುದ್ಧಿಗೋಷ್ಟಿಯಲ್ಲಿ ಮಾತನಾಡಿ, ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಭುವನೇಂದ್ರ ಕಾಲೇಜಿನ ಪ್ರಾಂಶುಪಾಲ ಡಾ. ಮಂಜುನಾಥ್ ಕೋಟ್ಯಾನ್, ವಿರಾಜಪೇಟೆ ಕಾವೇರಿ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ. ಆನಂದ ಕಾರ್ಲ, ಅತ್ಯುತ್ತಮ ಗ್ರಂಥಪಾಲಕ ವಿಭಾಗದಲ್ಲಿ ಮಂಗಳೂರು ಬೆಸೆಂಟ್ ಸಂಧ್ಯಾ ಕಾಲೇಜಿನ ಗ್ರಂಥಪಾಲಕ ಡಾ. ವಾಸಪ್ಪ ಗೌಡ, ಅತ್ಯುತ್ತಮ ದೈಹಿಕ ಶಿಕ್ಷಣ ಶಿಕ್ಷಕರು ಪ್ರಶಸ್ತಿಗೆ ಕುಂದಾಪುರ ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜಿನ ದೈಹಿಕ ಶಿಕ್ಷಕ ಕೆ. ಶಂಕರನಾರಾಯಣ ಅವರನ್ನು ಆಯ್ಕೆ ಮಾಡಲಾಗಿದೆ. ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘದ ಸ್ಥಾಪಕ ಅಧ್ಯಕ್ಷ ಡಾ. ರಘು ಅಕ್ಕಮಂಚಿ ಹಾಗೂ ೨೦೨೪ನೇ ಸಾಲಿನಲ್ಲಿ ಪಿಹೆಚ್ಡಿ ಪದವಿ ಪಡೆದ ಸಂಶೋಧನಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದ್ದು, ಹೊಸದಿಲ್ಲಿಯ ರಾಷ್ಟಿçÃಯ ಮೌಲ್ಯಮಾಪನ ಮತ್ತು ಮಾನ್ಯತಾ ಮಂಡಳಿಯ ಅಧ್ಯಕ್ಷ ಅನಿಲ್ ಸಹಸ್ರಬುದ್ಧೆ ಪ್ರಶಸ್ತಿ ಪ್ರಧಾನ ನೆರವೇರಿಸಲಿದ್ದಾರೆ ಎಂದರು. ಮಣಿಪಾಲ ಮಾಹೆ ಸಹ ಕುಲಾಧಿಪತಿ ಡಾ. ಎಚ್.ಎಸ್ ಬಲ್ಲಾಳ್ ಅಧ್ಯಕ್ಷತೆ ವಹಿಸಲಿದ್ದು, ಅಥಿಗಳಾಗಿ ಮಂಗಳೂರು ವಿ.ವಿ. ಕುಲಪತಿ ಪ್ರೊ. ಪಿ. ಎಲ್ ಧರ್ಮ, ತುಮಕೂರು ಯುನಿವರ್ಸಿಟಿಯ ಮಾಜಿ ಸಿಂಡಿಕೇಟ್ ಸದಸ್ಯ, ನ್ಯಾಯವಾದಿ ಸುವೃತ್ ಕುಮಾರ್ ಹಾಗೂ ಭುವನೆಂದ್ರ ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಸಿಎ ಶಿವಾನಂದ ಪೈ ಭಾಗವಹಿಸಲಿದ್ದಾರೆ ಎಂದರು. ಬೆಂಗಳೂರು ಕೆಆರ್ಎಸ್ಎಸ್ಎಸ್ನ ಅಧ್ಯಕ್ಷ ಡಾ. ಗುರುನಾಥ್ ಬಡಿಗೇರ್, ಬೆಂಗಳೂರು ಕೆಆರ್ಎಸ್ಎಸ್ಎಂನ ಪ್ರಧಾನ ಕಾರ್ಯದರ್ಶಿ ಪ್ರೊ. ರೋಹಿಣಿ ಕುಮಾರ್ ಹಿಲ್ಲಿ ಕಲಬುರ್ಗಿ, ಬೆಂಗಳೂರು ಕೆಆರ್ಎಂಎಸ್ಎಸ್ನ ರಾಜ್ಯ ಜಂಟಿ ಕಾರ್ಯದರ್ಶಿ ಡಾ. ಮಾಧವ ಎಂ.ಕೆ ಮುಂತಾದವರು ಉಪಸ್ಥಿತರಿರುವರು.