ಸೇವೆಯೊಂದಿಗೆ ಸಂಭ್ರಮ” ಸ್ಪೂರ್ತಿ ಭಿನ್ನ ಸಾಮರ್ಥ್ಯದ ಮಕ್ಕಳೊಂದಿಗೆ ಮೌಂಟ್ ಕಾರ್ಮೆಲ್ ಆಂಗ್ಲ ಮಾಧ್ಯಮ ಶಾಲಾ ಮಕ್ಕಳ ಕ್ರಿಸ್ಮಸ್ ಸಂಭ್ರಮಾಚರಣೆ
ಶಿರ್ತಾಡಿ : ಮೌಂಟ್ ಕಾರ್ಮೆಲ್ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯಿನಿ ಬಿಂದು ಮ್ಯಾಕ್ಸಿಮ್ ಡಿಸೋಜ ನೇತೃತ್ವದಲ್ಲಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳೊಂದಿಗೆ ಸ್ಪೂರ್ತಿ ಭಿನ್ನ ಸಾಮರ್ಥ್ಯದ ಮಕ್ಕಳ ತರಬೇತಿ ಕೇಂದ್ರ ಬೆಳುವಾಯಿ ಭೇಟಿ ನೀಡಿ ಸಾಂಸ್ಕೃತಿಕ ಕಾರ್ಯಕ್ರಮದೊಂದಿಗೆ ಕ್ರಿಸ್ಮಸ್ ದಿನವನ್ನು ಆಚರಿಸಲಾಯಿತು.

ಸಂಸ್ಥೆಯ ಅಧ್ಯಕ್ಷ ಸತೀಶ್ ಶೆಟ್ಟಿಗಾರ್ ಸಂಸ್ಥೆಯ ಬಗ್ಗೆ ಹಾಗೂ ಶಾಲಾ ಮಕ್ಕಳ ಕ್ರೀಡಾ ಸಾಧನೆಯ ಬಗ್ಗೆ ತಿಳಿಸಿದರು.
ನಂತರ ವಿದ್ಯಾರ್ಥಿಗಳಿಗೆ ಸಿಹಿತಿಂಡಿಯನ್ನು ಹಂಚಲಾಯಿತು.ಕಾರ್ಯಕ್ರಮಕ್ಕೆ ಪ್ರಿನ್ಸಿಯಾ ಸ್ವಾಗತಿಸಿದರು. ಶಾಲಿನಿಯವರು ನಿರೂಪಿಸಿದರು.
Post Views: 193





































