‘ಸ್ಟಿಂಗ್’ ಕೃಪಾ ಆಳ್ವ ಉಚ್ಚಾಟನೆ!

Picture of RB NEWS

RB NEWS

Bureau Report

‘ಸ್ಟಿಂಗ್’ ಕೃಪಾ ಆಳ್ವ ಉಚ್ಚಾಟನೆ!

ಬೆಂಗಳೂರು : ಪಕ್ಷ ವಿರೋಧಿ ಚಟುವಟಿಕೆ ಆರೋಪದ ಹಿನ್ನೆಲೆಯಲ್ಲಿ ಕೃಪಾ ಆಳ್ವಾ ಅವರನ್ನು ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರ ಸೂಚನೆಯ ಮೇರೆಗೆ ತಕ್ಷಣದಿಂದ ಜಾರಿಗೆ ಬರುವಂತೆ ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಚಾಟನೆ ಮಾಡಲಾಗಿದೆ.

ಶುಕ್ರವಾರ ಈ ಸಂಬಂಧ ಪಕ್ಷದ ಎಂ.ನಾರಾಯಣಸ್ವಾಮಿ ಆದೇಶ ಹೊರಡಿಸಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿ ‘ಸ್ಟಿಂಗ್ ಆಪರೇಶನ್’ ನಡೆಸಲಾಗಿದೆ ಎಂಬ ಪ್ರಕರಣದ ಹಿನ್ನೆಲೆಯಲ್ಲಿ ಮೇಲ್ಕಂಡ ಕ್ರಮ ಕೈಗೊಳ್ಳಲಾಗಿದೆ ಎಂದು ಉಲ್ಲೇಖಿಸಲಾಗಿದೆ.

ಸ್ಟಿಂಗ್ ಪ್ರಕರಣದ ಬಗ್ಗೆ ಮಾಧ್ಯಮಗಳಲ್ಲಿ ನಕಾರಾತ್ಮಕ ಪ್ರಚಾರ ಹಾಗೂ ಪ್ರತಿಕ್ರಿಯೆಗಳಿಂದಾಗಿ ಕಾಂಗ್ರೆಸ್‌ ಪಕ್ಷಕ್ಕೆ ಮುಜುಗರ ಎದುರಾಗಿದ್ದು, ಈ ಘಟನೆಯಲ್ಲಿ ತಾವು ಭಾಗಿಯಾಗಿದ್ದಾರೆಂಬ ಆರೋಪಗಳ ಹಿನ್ನಲೆಯಲ್ಲಿ ಕಾರಣ ಕೇಳಿ ನೋಟೀಸ್ ನೀಡಲಾಗಿತ್ತು.

ಕೆಪಿಸಿಸಿ ವತಿಯಿಂದ ನೀಡಲಾದ ಕಾರಣ ಕೇಳಿ ನೋಟಿಸ್‌’ಗೆ ತಾವು ಇದುವರೆಗೂ ಯಾವುದೇ ರೀತಿಯ ಉತ್ತರ ಅಥವಾ ಸಮಜಾಯಿಷಿ ನೀಡಿರುವುದಿಲ್ಲ. ಈ ಸ್ಟಿಂಗ್ ಪ್ರಕರಣದಲ್ಲಿ ತಮ್ಮ ಹೆಸರು ಕೇಳಿ ಬಂದ ಕಾರಣದಿಂದ ಉಚ್ಚಾಟನೆ ಮಾಡಲಾಗಿದೆ ಎಂದು ತಿಳಿಸಲಾಗಿದೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top