ಹೆಬ್ರಿ : ಸ್ವಾತಂತ್ರ್ಯೋತ್ಸವದಂದು ಸ್ವಾತಂತ್ರ್ಯ ಹೋರಾಟಗಾರ ಎಂ.ಡಿ. ಅಧಿಕಾರಿ ಅವರ ಪುತ್ಥಳಿಯನ್ನು ಲೋಕಾರ್ಪಣೆ ಮಾಡಿದ ಮಾಜಿ ಮುಖ್ಯಮಂತ್ರಿ ಡಾ. ಎಂ.ವೀರಪ್ಪ ಮೊಯಿಲಿ

Picture of RB NEWS

RB NEWS

Bureau Report

ಪಡುಕುಡೂರು : ಸ್ವಾತಂತ್ರ್ಯ ಹೋರಾಟಗಾರರಾಗಿ ಪಡುಕುಡೂರಿನ ಕೀರ್ತಿಯನ್ನು ಜಗದಗಲ ಪಸರಿಸಿದ ಜನಮನದಲ್ಲಿ ಶಾಶ್ವತವಾಗಿ ನೆಲೆಯಾದ ಪಡುಕುಡೂರು ಬೀಡು ಎಂ.ಡಿ.ಅಧಿಕಾರಿ ಅವರ ಪುತ್ಥಳಿಯನ್ನು ಪ್ರತಿಷ್ಠಾಪಿಸಿ ಲೋಕಾರ್ಪಣೆ ಮಾಡುವ ಸಂಭ್ರಮದ ಕಾರ್ಯಕ್ರಮ ಗುರುವಾರ ಸಂಜೆ ನಡೆಯಿತು.
ಸಾವಿರಾರು ಜನ ಐತಿಹಾಸಿಕ ಸಂಭ್ರಮಕ್ಕೆ ಸಾಕ್ಷಿಯಾದರು.

ಪ್ರತಿಮೆ ಪ್ರತಿಷ್ಠಾಪನೆಯ ರೂವಾರಿ ದೇಶಭಕ್ತರಾದ ಪಡಕುಪರ್ಕಳ ಶಂಕರ ಶೆಟ್ಟಿಯವರು ಮಾತನಾಡಿ ಎಂ.ಡಿ.ಅಧಿಕಾರಿ ಅವರ ಪ್ರತಿಮೆ ಸ್ಥಾಪನೆ ನನ್ನ ಬಾಲ್ಯದ ಕನಸು ನನಸಾಗಿದೆ ಹರ್ಷ ವ್ಯಕ್ತಪಡಿಸಿದರು. ಇದೇ ಸಂದರ್ಭದಲ್ಲಿ ಮಾಜಿ ಯೋಧರು, ಪಡುಕುಡೂರು ಪರಿಸರದ ಶೈಕ್ಷಣಿಕ ಸಾಧಕರು ಹಾಗೂ ದಾನಿಗಳಿಗೆ ಮತ್ತು ಗಣ್ಯರ ಸನ್ಮಾನ ನಡೆಯಿತು.

ಪುತ್ಥಳಿ ಪ್ರತಿಷ್ಠಾಪನಾ ಸಮಿತಿಯ ಅಧ್ಯಕ್ಷ ಪಡುಕುಡೂರು ಪಟೇಲರ ಮನೆ ಜಗದೀಶ ಹೆಗ್ಡೆ ಮಾತನಾಡಿ ಸಂಭ್ರಮದ ಯಶಸ್ಸಿಗೆ ಸಹಕರಿಸಿದ ಸರ್ವರಿಗೂ ಕೃತಜ್ಞತೆ ಸಲ್ಲಿಸಿದರು.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top