ಹೊಸವರ್ಷದ ತುರ್ತು ಪ್ರತಿಸ್ಪಂದನಕ್ಕಾಗಿ ಸಕಲ ರೀತ್ಯಾದಲ್ಲಿ ಸಜ್ಜಾದ ಆರೋಗ್ಯ ಕವಚ 108

Picture of RB NEWS

RB NEWS

Bureau Report

ಕಾರ್ಕಳ : ಹೊಸ ವರ್ಷಚಾರಣೆಯ ವೇಳೆ ಸಂಭವಿಸಬಹುದಾದ ರಸ್ತೆ ಅಪಘಾತಗಳು ಸಹಿತ ನಾನಾ ರೀತಿಯಲ್ಲಿ ಉಂಟಾಗುವ ಜೀವ ಹನಿಯನ್ನು ತಡೆಯುವ ನಿಟ್ಟಿನಲ್ಲಿ 108 ಆರೋಗ್ಯ ಕವಚ ಅಂಬುಲೆನ್ಸ್ ಸಕಲ ರೀತ್ಯಾದಲ್ಲಿ ಸಜ್ಜಾಗಿದೆ.

ಸಾಮಾನ್ಯ ದಿನಗಳಿಗಿಂತ ಹೊಸ ವರ್ಷದ ಆಚರಣೆ ದಿನದಂದು ಹೆಚ್ಚಿನ ಅನಾಹುತ ಪ್ರಕರಣಗಳು ದಾಖಲಾಗುತ್ತಿರುವುದು ಗಮನಾರ್ಹ ವಿಚಾರವಾಗಿದೆ.

108 ಅಂಬುಲೆನ್ಸ್ ಸೇವೆಯು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯೊಂದಿಗೆ ನಿಕಟ ಸಹಕಾರವನ್ನು ಹೊಂದಿರುತ್ತದೆ.
ಹೆಚ್ಚಿನ ತುರ್ತುಪರಿಸ್ಥಿತಿಯನ್ನು ನಿರೀಕ್ಷಿಸುವ ಪ್ರದೇಶಗಳಲ್ಲಿ ಹೆಚ್ಚುವರಿ ಅಂಬುಲೆನ್ಸ್ ಅನ್ನು ನಿಯೋಜಿಸಲಾಗುವುದು. ಹೆಚ್ಚುವರಿ ಸೇವೆಗಾಗಿ ಆಂಬುಲೆನ್ಸ್ ಸಿಬ್ಬಂದಿಯ ಸಾಪ್ತಾಯಿಕ ರಜೆಯನ್ನು ರದ್ದುಗೊಳಿಸಲಾಗಿದೆ ಮುಂಜಾಗೃತವಾಗಿಯೇ ಎಲ್ಲಾ ಆಂಬುಲೆನ್ಸ್ ಗಳಲ್ಲಿ ಇಂಧನ , ಆಮ್ಲಜನಕ, ವೈದ್ಯಕೀಯ ಉಪಕರಣಗಳನ್ನು ವ್ಯವಸ್ಥೆಗಳು ಸುಸಜ್ಜಿತವಾಗಿದೆ.

ಜಿಲ್ಲೆಯಲ್ಲಿ 18 ಅಂಬುಲೆನ್ಸ್ ಗಳನ್ನು ತಜ್ಞ ಸಿಬ್ಬಂದಿಗಳೊಂದಿಗೆ ನಿಯೋಜಿಸಲಾಗಿದೆ. ತುರ್ತುಪರಿಸ್ಥಿತಿಗಳಲ್ಲಿ 108 ಫ್ರೀ ಸಂಖ್ಯೆ ಡಯಲ್ ಮಾಡಬಹುದು ಎಂದು ಜಿಲ್ಲಾ ವ್ಯವಸ್ಥಾಪಕ ಮಹಾಬಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top