ವಿಪತ್ತು ನಿರ್ವಹಣಾ ಘಟಕದ ಸದಸ್ಯರಿಗೆ ನುರಿತ ತಜ್ಞರಿಂದ ತರಬೇತಿ
ಮಂಜೇಶ್ವರ : ತಮ್ಮ ರಕ್ಷಣೆಗೆ ಮಾಡಿಕೊಂಡು ವಿಪತ್ತು ನಿರ್ವಹಣೆ ಮಾಡುವ ಸಲುವಾಗಿಯೇ ವಿಪತ್ತು ನಿರ್ವಹಣಾ ಘಟಕದ ಸದಸ್ಯರಿಗೆ ಕಾಲಕಾಲಕ್ಕೆ ಸಂಬಂಧಪಟ್ಟ ನುರಿತ ತಜ್ಞರಿಂದ ತರಬೇತಿ ನೀಡಲಾಗುತ್ತಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ದಕ್ಷಿಣ ಕನ್ನಡ ಜಿಲ್ಲಾ 2 ರ ನಿರ್ದೇಶಕ ಪ್ರವೀಣ್ ಕುಮಾರ್ ಹೇಳಿದರು.
ಮಂಜೇಶ್ವರದ ಹೊಸಂಗಡಿಯ ಪ್ರೇರಣಾ ಸಭಾಂಗಣದಲ್ಲಿ ನಡೆದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಉಡುಪಿ ಪ್ರಾದೇಶಿಕ ವಿಭಾಗದ ವಿಟ್ಲ, ಕಾಸರಗೋಡು, ಮಂಜೇಶ್ವರ ತಾಲೂಕಿನ ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯ ಸ್ವಯಂ ಸೇವಕರ ತರಬೇತಿ ಕಾರ್ಯಗಾರ ಕಾರ್ಯಕ್ರಮದಲ್ಲಿ ಶೌರ್ಯ ತಂಡದ ಸದಸ್ಯರಿಗೆ ಸಮವಸ್ತ್ರ ವಿತರಿಸಿ ಮಾತನಾಡಿದರು.




ಕಾಸರಗೋಡು ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ ಗೋಪಾಲ ಶೆಟ್ಟಿ ಅರಿಬೈಲ್ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಡಾ. ಡಿ. ವೀರೇಂದ್ರ ಹೆಗಡೆಯವರು ಕರ್ನಾಟಕ ರಾಜ್ಯದಲ್ಲಿ ಮಾಡಿರುವಂತ ಸೇವೆಯನ್ನು ಕಾಸರಗೋಡು,ಮಂಜೇಶ್ವರ ಗಳಿಗೂ ವಿಸ್ತರಿಸಿದ್ದು ಅಭಿನಂದದಾಯಕವಾಗಿದೆ ಎಂದರು.
ಮಂಜೇಶ್ವರ ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷ ಡಾ. ಜಯಪ್ರಕಾಶ್ ತೊಟ್ಟೆತೋಡಿ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು
ಇದೇ ಸಂದರ್ಭದಲ್ಲಿ ವಿಟ್ಲ, ಕಾಸರಗೋಡು, ಮಂಜೇಶ್ವರ ಯೋಜನಾ ಕಚೇರಿಯ ವ್ಯಾಪ್ತಿಗೆ ಸೇರಿದ ಸಾಧಕ ಶೌರ್ಯ ತಂಡಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು.
ಎಲ್ಲಾ ಶೌರ್ಯ ತಂಡದ ಸ್ವಯಂ ಸೇವಕರಿಗೆ ಸಮವಸ್ತ್ರವನ್ನು ವಿತರಿಸಲಾಯಿತು.
ಗ್ರಾಮಾಭಿವೃದ್ಧಿ ಯೋಜನೆಯಿಂದ ಸಹಾಯಧನ ಹಾಗೂ ಆರೋಗ್ಯ ರಕ್ಷಾ ವಿಮೆಯ ಮಂಜೂರಾತಿ ಪತ್ರವನ್ನು ವಿತರಿಸಲಾಯಿತು
ಕಾಸರಗೋಡು ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷ ಅಖಿಲೇಶ್ ನಗುಮುಗಂ, ಕಾಸರಗೋಡು ಜನಜಾಗೃತಿ ವೇದಿಕೆಯ ನಿಕಟಪೂರ್ವ ಅಧ್ಯಕ್ಷ ಅಶ್ವಥ್ ಪೂಜಾರಿ ಲಾಲ್ ಬಾಗ್, ಉಷಾ ಫೈರ್ ಎಂಡ್ ಸೇಫ್ಟಿ ಕಂಪನಿಯ ತರಬೇತುದಾರ ಸಂತೋಷ ಪೀಟರ್ ಡಿ’ಸೋಜಾ, ವಿಪತ್ತು ನಿರ್ವಹಣಾ ವಿಭಾಗದ ಯೋಜನಾಧಿಕಾರಿಗಳಾದ ಜೈವಂತ್ ಪಟಗಾರ,ಜನಜಾಗೃತಿ ಮೇಲ್ವಿಚಾರಕರಾದ ನಿತೇಶ್ ಕೆ, ಹಾಗೂ ಕಾಸರಗೋಡು,ಮಂಜೇಶ್ವರ ತಾಲೂಕಿನ ಮೇಲ್ವಿಚಾರಕರು,ಆಡಳಿತ ಪ್ರಬಂಧಕರು ಮತ್ತು ವಿಟ್ಲ, ಕಾಸರಗೋಡು, ಮಂಜೇಶ್ವರ ತಾಲೂಕಿನ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸಂಯೋಜಕರು,ಘಟಕ ಪ್ರತಿನಿಧಿ ಗಳು, ಸ್ವಯಂ ಸೇವಕರು ಉಪಸ್ಥಿತರಿದ್ದರು.
ಕ್ಷೇತ್ರ ಯೋಜನಾಧಿಕಾರಿ ಮುಖೇಶ್ ಸ್ವಾಗತಿಸಿದರು. ಜನಜಾಗೃತಿ ಯೋಜನಾಧಿಕಾರಿ ಗಣೇಶ್ ಆಚಾರ್ಯ ವಂದಿಸಿದರು. ಮೇಲ್ವಿಚಾರಕರಾಕ ಭಾಸ್ಕರ ನಿರೂಪಿಸಿದರು.
ಉದ್ಘಾಟನಾ ಸಭಾ ಕಾರ್ಯಕ್ರಮದ ಬಳಿಕ ಉಷಾ ಫೈರ್ ಎಂಡ್ ಸೇಫ್ಟಿ ಕಂಪನಿಯ ತರಬೇತುದಾರರಾದ ಸಂತೋಷ ಪೀಟರ್ ಡಿ’ಸೋಜಾ ರವರು ತುರ್ತು ಸಂದರ್ಭದಲ್ಲಿ ಆತ್ಮರಕ್ಷಣೆ ಮಾಡಿಕೊಂಡು ವಿಪತ್ತು ನಿರ್ವಹಣೆ ಮಾಡುವ ವಿಧಾನಗಳ ಬಗ್ಗೆ ತರಬೇತಿ ನೀಡಿದರು.






































