[t4b-ticker]

ಮಾಜಿ ಐಎಎಸ್ ಅಧಿಕಾರಿ, ನಟ ಕೆ.ಶಿವರಾಮ್  ನಿಧನ

Picture of RB NEWS

RB NEWS

Bureau Report

ಬೆಂಗಳೂರು : ಹೃದಯಾಘಾತಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಐಎಎಸ್ ಅಧಿಕಾರಿ, ನಟ ಕೆ.ಶಿವರಾಮ್ ಇಂದು ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.

ಕನ್ನಡದಲ್ಲಿ ಪ್ರಪ್ರಥಮ ಬಾರಿಗೆ ಐಎಎಸ್ ಬರೆದು ಭಾರತೀಯ ಆಡಳಿತಾ ಸೇವೆಯಲ್ಲಿ ಅಧಿಕಾರಿಯಾಗಿ ಸೇವೆ ಸಲ್ಲಿಸಿ, ನಿವೃತ್ತರಾಗಿದ್ದ ಹಾಗೂ ‘ಬಾ ನಲ್ಲೆ ಮಧು ಚಂದ್ರಕೆ’ ಸೇರಿದಂತೆ ಹಲವು ಚಿತ್ರಗಳ ಮೂಲಕ ಕನ್ನಡ ಸಿನಿ ರಸಿಕರಿಗೆ ಪರಿಚಿತರಾಗಿದ್ದ ಕೆ. ಶಿವರಾಮ್ ಅವರಿಗೆ ಹೃದಯಾಘಾತವಾಗಿತ್ತು. ಕೂಡಲೇ ಅವರನ್ನು ಬೆಂಗಳೂರಿನ ಎಚ್ ಸಿಜಿ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇಂದು ಅವರು ಚಿಕಿತ್ಸೆ ಫಲಿಸದೇ ಇನ್ನಿಲ್ಲವಾಗಿದ್ದಾರೆ.

ನಿನ್ನೆ ಸಂಜೆ ನನ್ನ ಅನುಗಾಲದ ಗೆಳೆಯ ಅರದೇಶಹಳ್ಳಿ ವೆಂಕಟೇಶ್ ಕೆ. ಶಿವರಾಂ ಅವರು ಸೀರಿಯಸ್ಸಾಗಿದ್ದಾರೆ, ಹೆ಼ಚ್. ಸಿ. ಜಿ ಆಸ್ಪತ್ರೆಯಲ್ಲಿದ್ದಾರೆ ಎಂದರು. ಕೂಡಲೇ ನನ್ನ ಹಿರಿಯಣ್ಣ ಡಾ. ಸ್ವಾಮಿ ಅವರಿಗೆ ಫೋನ್ ಮಾಡಿದೆ. ಅವರ ವೈಧ್ಯಕೀಯ ಭಾಷೆ ನನಗೆ ಅರ್ಥವಾಯಿತು. ವೆಂಕಟೇಶ್ ಅವರಿಗೆ ಹೋಪ್ಸ್ ಇಲ್ಲವೆಂದು ಹೇಳಿದೆ. ಇಂದು ಬೆಳಿಗ್ಗೆ ಅವರು ಇನ್ನಿಲ್ಲವೆಂಬ ಸುದ್ಧಿ ಹೊರಬಿದ್ದಿದೆ. ಕೇವಲ ಹತ್ತನ್ನೆರಡು ಗಂಟೆಗಳ ಹಿಂದಿನ ಸೀರಿಯಸ್ ಎಂಬ ಸುದ್ದಿ ಮಲಗಿ ಏಳುವಷ್ಟರಲ್ಲಿ ‘ಇನ್ನಿಲ್ಲ’ ಎಂದಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಎಂದು ಅವರ ಬಹುಕಾಲದ ಗೆಳೆಯ ನಾಗೇಶ ಕಾಳೇನಹಳ್ಳಿ ಮಾಹಿತಿ ಹಂಚಿಕೊಂಡಿದ್ದಾರೆ

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top