2 ಸೇತುವೆಗಳ ನಿರ್ಮಾಣಕ್ಕೆ ₹5 ಕೋಟಿ ಅನುದಾನ ಬಿಡುಗಡೆ-ಶಾಸಕ ವಿ ಸುನಿಲ್‌ ಕುಮಾರ್

Picture of RB NEWS

RB NEWS

Bureau Report


ಕಾರ್ಕಳ : ವಿಧಾನಸಭಾ ಕ್ಷೇತ್ರದ ರಸ್ತೆ ಮತ್ತು ಸೇತುವೆಗಳ ನಿರ್ಮಾಣಕ್ಕಾಗಿ ರಾಜ್ಯ ಸರ್ಕಾರವು ಒಟ್ಟು ₹5.00 ಕೋಟಿ ಅನುದಾನವನ್ನು ಬಿಡುಗಡೆ ಮಾಡಿದೆ.
03 ಕೋಟಿ ರೂಪಾಯಿ ವೆಚ್ಚದಲ್ಲಿ ಹೆಬ್ರಿ ತಾಲೂಕಿನ ನಾಡ್ಪಾಲು ಗ್ರಾಮದ ಕೂಡ್ಲು ಬೀರನ್‌ಬೈಲು ಪ್ರದೇಶದ ಸೇತುವೆ ಹಾಗೂ 02 ಕೋಟಿ ರೂಪಾಯಿ ವೆಚ್ಚದಲ್ಲಿ ಮರ್ಣೆ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಹೆರ್ಮುಂಡೆ ಪ್ರದೇಶದಲ್ಲಿ ಸೇತುವೆ ನಿರ್ಮಾಣಗೊಳ್ಳಲಿದೆ.
ಈ ಎರಡೂ ಸೇತುವೆಗಳು ಜನರ ಬಹುದಿನಗಳ ಬೇಡಿಕೆಯಾಗಿದ್ದು, ಸೇತುವೆಗಳ ನಿರ್ಮಾಣಕ್ಕೆ ವಿಶೇಷ ಅನುದಾನ ನೀಡುವಂತೆ ಸರ್ಕಾರಕ್ಕೆ ಹಾಗೂ ಇಲಾಖಾ ಸಚಿವರಿಗೆ ಪತ್ರ ಮುಖೇನ ಮನವಿ ಮಾಡಲಾಗಿತ್ತು. ಇದರನ್ವಯ ಕಾರ್ಕಳ ವಿಧಾನ ಸಭಾ ಕ್ಷೇತ್ರಕ್ಕೆ 05.00 ಕೋಟಿ ರೂ ಅನುದಾನ ಬಿಡುಗಡೆಯಾಗಿದ್ದು ಆದಷ್ಟು ಶೀಘ್ರವಾಗಿ ಇಲಾಖಾ ಪ್ರಕ್ರಿಯೆಗಳನ್ನು ಮುಗಿಸಿ ಕಾಮಗಾರಿಗಳನ್ನು ಆರಂಭಿಸಲಾಗುವುದು ಎಂದು ಶಾಸಕರ ವಿಕಾಸ ಜನಸೇವಾ ಕಛೇರಿ ಪ್ರಕಟಣೆಯಲ್ಲಿ ತಿಳಿಸಿದೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top