20 ಗಂಟೆಗಳ ಕಾಲ ಕೊಳವೆ ಬಾವಿಯಲ್ಲಿ ಸಿಲುಕಿ ಜೀವಂತವಾಗಿ ಹೊರಬಂದ ಬಾಲಕ!

Picture of RB NEWS

RB NEWS

Bureau Report

ವಿಜಯಪುರ : ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ಬುಧವಾರ ಕೊಳವೆ ಬಾವಿಗೆ ಬಿದ್ದ 2 ವರ್ಷದ ಮಗು ಸಾತ್ವಿಕ್ ಮುಜಗೊಂಡ ರಕ್ಷಣಾ ಕಾರ್ಯಾಚರಣೆ ಮುಗಿದಿದೆ. 20 ಗಂಟೆಗಳ ಸುದೀರ್ಘ ಕಾರ್ಯಾಚರಣೆ ಬಳಿಕ ಎಸ್‌ಡಿಆರ್‌ಎಫ್‌, ಎನ್‌ಡಿಆರ್‌ಎಫ್ ತಂಡವು ಮಗುವನ್ನು ಜೀವಂತವಾಗಿ

ಹೊರತೆಗೆದಿದೆ.

ಬುಧವಾರ ಸಂಜೆ 6 ಗಂಟೆಗೆ ಕೊಳವೆ ಬಾವಿಗೆ ಬಿದ್ದ ಮಗು 18 ಗಂಟೆಗಳಿಂದ ಅನ್ನ ನೀರು ಇಲ್ಲದೆ  ಜೀವನ್ಮರಣ ಹೋರಾಟ ನಡೆಸುತ್ತಿತ್ತು.

ಮಗುವನ್ನು ಹೊರ ತೆಗೆದ ತಕ್ಷಣ ಪ್ರಥಮ ಚಿಕಿತ್ಸೆ ನೀಡಿದ ವೈದ್ಯರ ತಂಡ ಬಳಿಕ ಆಂಬುಲೆನ್ಸ್‌ನಲ್ಲಿ ಮಗುವನ್ನು ಇಂಡಿ ತಾಲೂಕು ಆಸ್ಪತ್ರೆಗೆ ದಾಖಲಿಸಿದೆ. ಸ್ಥಳದಲ್ಲಿ ಜಮಾಯಿಸಿದ್ದ ಸಾವಿರಾರು ಮಂದಿಯ ಪ್ರಾರ್ಥನೆ ಕೊನೆಗೂ ಫಲಿಸಿದ್ದು, ಮಗು ಜೀವಂತವಾಗಿ ಬಂದಿದೆ. 

ಮಗು ಬಾವಿಗೆ ಬಿದ್ದ ತಕ್ಷಣ ಅರ್ಧ ಗಂಟೆ ಊರವರು ಮತ್ತು ಸ್ಥಳೀಯರು ಮಗುವಿನ ರಕ್ಷಣೆಗೆ ಮುಂದಾಗಿ ಸಾಧ್ಯವಾಗದೇ ಇದ್ದಾಗ ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿದ್ದಾರೆ. ತಕ್ಷಣ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿ ನಿನ್ನೆ ಸಂಜೆಯಿಂದ ಇಂದು ಬೆಳಗ್ಗೆ 11 ಗಂಟೆಯವರೆಗೆ ಒಂದು ನಿಮಿಷವೂ ಬಿಡುವು ನೀಡದೆ ನಿರಂತರ ಕಾರ್ಯಾಚರಣೆ ನಡೆಸಿದ್ದರು. ಇದರ ಜೊತೆಗೆ ಮಗುವಿನ ಚಲನವಲನಗಳ ಬಗ್ಗೆ ಕ್ಯಾಮಾರದಲ್ಲಿ  ಸೆರೆಹಿಡಿಯಲಾಗಿತ್ತು. ಮಗು ಕಾಲು ಅಲ್ಲಾಡಿಸುತ್ತಿರುವುದು ಕ್ಯಾಮರಾದಲ್ಲಿ ದಾಖಲಾಗಿತ್ತು. ಬಳಿಕ ಮಗುವಿಗೆ ಆಕ್ಸಿಜನ್‌ ವ್ಯವಸ್ಥೆ ಕೂಡ ಮಾಡಲಾಗಿತ್ತು.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top