2023-24ನೇ ಸಾಲಿನ ಪ್ರತಿಭಾ ಪುರಸ್ಕಾರ

Picture of RB NEWS

RB NEWS

Bureau Report

ಕಾರ್ಕಳ ಮೈನ್ : ಪ್ರತಿಭಾ ಪುರಸ್ಕಾರ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾರ್ಕಳ ಮೈನ್ ಕಾರ್ಕಳ ಇಲ್ಲಿ 2023-24ನೇ ಸಾಲಿನ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಶಾಲೆಯ ಎಸ್.ಡಿ.ಎಂ.ಸಿ ಉಪಾಧ್ಯಕ್ಷ ಪರಸಪ್ಪ ಜೋಗಿನ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.ನಿವೃತ್ತ ಲೆಕ್ಕ ಪರಿಶೋಧಕ ಹಾಗೂ ಶಾಲೆಯ ಪೂರ್ವ ವಿದ್ಯಾರ್ಥಿ ಕಾರ್ಕಳ ಕಮಲಾಕ್ಷ ಕಾಮತ್ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭಹಾರೈಸಿದರು.

ಶಾಲಾ ಮುಖ್ಯೋಪಾಧ್ಯಾಯಿನಿ ಪ್ರತಿಮಾ ದೇವದಾಸ್ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿ, 2023-24 ಶೈಕ್ಷಣಿಕ ವರ್ಷದ ಶಾಲಾ ವಾರ್ಷಿಕ ವರದಿಯನ್ನು ವಾಚಿಸಿದರು.   
 ಕಾರ್ಯಕ್ರಮದಲ್ಲಿ  ಇ.ಸಿ.ಓ ಪ್ರಕಾಶ್ , ಸಿ. ಆರ್.ಪಿ ಜ್ಯೋತಿ,  ನಿಕಟ ಪೂರ್ವ ಎಸ್.ಡಿ.ಎಂ.ಸಿ ಅಧ್ಯಕ್ಷೆ ಶೋಭಾ ಉಪಸ್ಥಿತರಿದ್ದರು. 

      ಸಹ ಶಿಕ್ಷಕಿಯರಾದ ಶ್ರೇಯಾ, ಅಶ್ವಿನಿ, ಪೂಜಾ ವಿದ್ಯಾರ್ಥಿಗಳ ಬಹುಮಾನದ ಪಟ್ಟಿಯನ್ನು ವಾಚಿಸಿದರು.

ಈ ಸಂದರ್ಭದಲ್ಲಿ ಶಾಲಾ ಹಿತೈಷಿ, ಕೊಡುಗೈ ದಾನಿಯಾಗಿರುವ ಕಾರ್ಕಳ ಕಮಲಾಕ್ಷ ಕಾಮತ್ ಹಾಗೂ ನಿಕಟಪೂರ್ವ ಎಸ್.ಡಿ.ಎಂ.ಸಿ ಅಧ್ಯಕ್ಷೆ ಶೋಭಾ ಅವರನ್ನು ಅಭಿನಂದಿಸಲಾಯಿತು. ಮಧುಶ್ರೀ ಕಾರ್ಯಕ್ರಮವನ್ನು ನಿರೂಪಿಸಿದರು. ಹಿರಿಯ ಸಹ ಶಿಕ್ಷಕಿ ಶಶಿಕಲಾ ವಂದಿಸಿದರು.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top