2027ರ ಮಹಾಮಸ್ತಕಾಭಿಷೇಕ: ಕಾರ್ಕಳದಲ್ಲಿ ಪೂರ್ವಸಿದ್ಧತಾ ಸಭೆ

Picture of RB NEWS

RB NEWS

Bureau Report

2027ರ ಮಹಾಮಸ್ತಕಾಭಿಷೇಕ: ಕಾರ್ಕಳದಲ್ಲಿ ಪೂರ್ವಸಿದ್ಧತಾ ಸಭೆ


ಕಾರ್ಕಳ, ಫೆ. 16: ಶ್ರೀ ಬಾಹುಬಲಿ ಪ್ರತಿಮೆನಲ್ಲಿ 2027ರಲ್ಲಿ ನಡೆಯಲಿರುವ ಮಹಾಮಸ್ತಕಾಭಿಷೇಕ ಮಹೋತ್ಸವದ ಅಂಗವಾಗಿ ಕಾರ್ಕಳದಲ್ಲಿ ಪೂರ್ವಸಿದ್ಧತಾ ಸಭೆ ನಡೆಯಿತು. ಪ್ರತಿ 12 ವರ್ಷಗಳಿಗೊಮ್ಮೆ ನಡೆಯುವ ಈ ಮಹೋತ್ಸವಕ್ಕೆ ದೇಶ-ವಿದೇಶಗಳಿಂದ ಸಹಸ್ರಾರು ಯಾತ್ರಾರ್ಥಿಗಳು ಹಾಗೂ ಪ್ರವಾಸಿಗರು ಆಗಮಿಸುವ ನಿರೀಕ್ಷೆಯಿದೆ.
ಮಹಾಮಸ್ತಕಾಭಿಷೇಕ ಸಮಿತಿಯ ಕಾರ್ಯಾಧ್ಯಕ್ಷರಾದ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಹಾಗೂ ಶ್ರೀ ಮಹಾವೀರ್ ಹೆಗ್ಡೆ ಅವರ ನೇತೃತ್ವದಲ್ಲಿ, ಮಾಜಿ ಸಚಿವರು ಹಾಗೂ ಕಾರ್ಕಳ ಕ್ಷೇತ್ರದ ಶಾಸಕರಾದ ವಿ. ಸುನೀಲ್ ಕುಮಾರ್ ಅವರೊಂದಿಗೆ ಜೈನ ಸಮುದಾಯದ ಪ್ರಮುಖರ ಸಭೆ ನಡೆಯಿತು.
ಸಭೆಯಲ್ಲಿ ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಜೈನ ಬಸದಿಗಳು, ಕೆರೆಗಳು, ದೇವಸ್ಥಾನಗಳು, ಯಾತ್ರಿನಿವಾಸಗಳು ಹಾಗೂ ಪ್ರವಾಸಿ ತಾಣಗಳ ಅಭಿವೃದ್ಧಿ ಕುರಿತು ಚರ್ಚಿಸಲಾಯಿತು. ಮಹೋತ್ಸವವನ್ನು ಯಶಸ್ವಿಯಾಗಿ ಆಯೋಜಿಸಲು ಅಗತ್ಯವಾದ ಸಾರ್ವಜನಿಕ ಕಾಮಗಾರಿಗಳು ಮತ್ತು ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳುವಂತೆ ಜೈನ ಸಮಾಜದ ವತಿಯಿಂದ ಶಾಸಕರಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಅನಂತರಾಜ ಪೂವಣಿ, ಮೋಹನ್ ಪಡಿವಾಳ್, ಸಿಎ ಪ್ರಭಾತ್ ಕುಮಾರ್, ಎಂ.ಕೆ. ಸುವ್ರತ್ ಕುಮಾರ್, ಸುನಿಲ್ ಕುಮಾರ್ ಬಜಗೋಳಿ, ಭರತ್ ಕುಮಾರ್ ಜೈನ್ ಇರ್ವತ್ತೂರು, ಶೀತಲ್ ಜೈನ್ ಶಿರ್ಲಾಲು ಸೇರಿದಂತೆ ಸಮಾಜದ ಹಲವು ಪ್ರಮುಖರು ಉಪಸ್ಥಿತರಿದ್ದರು.

ವಿ.ಕೆ.ವಾಲ್ಪಾಡಿ

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top