ಭುವನೇಂದ್ರ ಪ್ರೀಮಿಯಂ ಲೀಗ್ ಕ್ರಿಕೆಟ್ ಪಂದ್ಯಾಟದ ಉದ್ಘಾಟನೆ
ಕಾರ್ಕಳ : ಶ್ರೀ ಭುವನೇಂದ್ರ ಕಾಲೇಜು, ಕಾರ್ಕಳದಲ್ಲಿ ಎರಡು ದಿನಗಳ ಭುವನೇಂದ್ರ ಪ್ರೀಮಿಯಂ ಲೀಗ್ ಕ್ರಿಕೆಟ್ ಪಂದ್ಯಾಟದ ಉದ್ಘಾಟನಾ ಕಾರ್ಯಕ್ರಮವು ಕಾಲೇಜಿನ ಕ್ರೀಡಾಂಗಣದಲ್ಲಿ ನೆರವೇರಿತು.
ಕ್ರೀಡೆಯನ್ನು ದೀಪ ಬೆಳಗಿ,ಉದ್ಘಾಟಿಸಿ ಮಾತನಾಡಿದ ಮುಖ್ಯ ಅತಿಥಿ ಹಾಗೂ ಕಾಲೇಜಿನ ಹಳೆ ವಿದ್ಯಾರ್ಥಿ ,ರಾಜ್ಯ ಬಿಜೆಪಿ ಯುವ ಮೋರ್ಚಾದ ರಾಜ್ಯ ಕಾರ್ಯದರ್ಶಿಗಳಾದ ವಿಖ್ಯಾತ್ ಶೆಟ್ಟಿ ಮಾತನಾಡಿ, ಶೈಕ್ಷಣಿಕ ಜೀವನದ ಮಾನಸಿಕ ಸಿದ್ಧತೆಗೆ ಕ್ರೀಡೆಯ ಅಗತ್ಯವಿದೆ .ಎಲ್ಲ ವಿದ್ಯಾರ್ಥಿಗಳು ಒಳ್ಳೆಯ ರೀತಿಯಲ್ಲಿ ಕ್ರೀಡಾಕೂಟದಲ್ಲಿ ಉತ್ಸಾಹದಿಂದ ಭಾಗವಹಿಸಬೇಕು ಎಂದರು.
ಮತ್ತೋರ್ವ ಮುಖ್ಯ ಅತಿಥಿ ಕಾಲೇಜಿನ ಹಳೆ ವಿದ್ಯಾರ್ಥಿ ಹಾಗೂ ಪುರಸಭೆಯ ಪ್ರದೀಪ್ ರಾಣೆ ಮಾತನಾಡಿ ಸುಂದರ ಕ್ರೀಡಾಕೂಟವನ್ನು ಆಯೋಜಿಸಿದ್ದಕ್ಕಾಗಿ ವಂದನೆಗಳನ್ನು ಸಲ್ಲಿಸುತ್ತಾ, ಎಲ್ಲ ವಿದ್ಯಾರ್ಥಿಗಳಿಗೂ ಶುಭ ಹಾರೈಸಿದರು.
ಅಧ್ಯಕ್ಷತೆಯನ್ನು ವಹಿಸಿದ್ದ ಪ್ರಾಚಾರ್ಯ ಡಾ.ಮಂಜುನಾಥ ಎ.ಕೋಟ್ಯಾನ್ ಮಾತನಾಡಿ, ಇಂದಿನ ಇಬ್ಬರೂ ಮುಖ್ಯ ಅತಿಥಿಗಳು ಎಲ್ಲರಿಗೂ ಮಾದರಿಯಾಗಿ ನಿಲ್ಲುವುದಕ್ಕೆ ಈ ಕಾಲೇಜಿನಲ್ಲಿ ಇರುವ ಎಲ್ಲ ಅವಕಾಶಗಳು ಸಾಧ್ಯವಾಗಿಸಿವೆ.ಎಲ್ಲರೂ ಕ್ರೀಡೆಗಳಲ್ಲಿ ಭಾಗವಹಿಸಿದವರೇ.ಕ್ರೀಡೆ ಸಂಘಟನೆಯನ್ನು ಉದ್ದೀಪಿಸುತ್ತದೆ. ಶಿಕ್ಷಣದ ಶಿಸ್ತಿನ ಜೊತೆಗೆ ಅದರಾಚೆಗಿನ ಪಠ್ಯೇತರ ಚಟುವಟಿಕೆಗಳು ಯಾವಾಗಲೂ ನೆನಪಿನಲ್ಲಿ ಉಳಿಯುತ್ತದೆ ಎಂದರು.
ವೇದಿಕೆಯಲ್ಲಿ ಸಹ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಪ್ರೊ. ನಂದಕಿಶೋರ್ ಉಪಸ್ಥಿತರಿದ್ದರು.
ಕ್ರೀಡಾಧಿಕಾರಿ,ನವೀನ್ ಚಂದ್ರ ಸ್ವಾಗತಿಸಿ,ಶ್ವೇತಾ ನಿರೂಪಿಸಿದರು.ಶಂಕರ್ ಕುಡ್ವ ವಂದಿಸಿದರು.






































