ಸುಹಾಸ್ ಶೆಟ್ಟಿ ಕೊಲೆಗೆ ಪ್ರತಿಕಾರಕ್ಕೆ ಮುಂದಾದ ಕೋಡಿಕೆರೆ ಲೋಕೇಶ್ ಬಂಧನ

ಕಾವೂರು ಪೊಲೀಸರ ಕಾರ್ಯಾಚರಣೆ
ಮಂಗಳೂರು: ಹಿಂದೂಪರ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಬಳಿಕ ಕರಾವಳಿ ನಗರಿ ಬೂದಿ ಮುಚ್ಚಿದ ಕೆಂಡದಂತಿದೆ.
ಇದರ ಹಿನ್ನಲ್ಲೆಯಲ್ಲಿ ಎಚ್ಚೆತ್ತುಕೊಂಡಿರುವ ದಕ್ಷಿಣ ಕನ್ನಡದಲ್ಲಿ ನಿಷೇದಾಜ್ಞೆ ಜಾರಿಯಲ್ಲಿದೆ. ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸರು ಕಠಿಣ ಕ್ರಮಗಳನ್ನು ಜಾರಿ ಮಾಡಿದ್ದಾರೆ.
ಇದರ ನಡುವೆಯೇ ಮಂಗಳೂರಿನಲ್ಲಿ ಪ್ರತೀಕಾರದ ಕಿಚ್ಚು ಕೂಡ ಜೋರಾದಂತೆ ಕಾಣಿಸುತ್ತಿದೆ. ಸುಹಾಸ್ ಶೆಟ್ಟಿ ಹತ್ಯೆ ಬಳಿಕ ಪ್ರತೀಕಾರಕ್ಕೆ ಹಾತೊರೆಯುತ್ತಿದ್ದ ರೌಡಿಶೀಟರ್ನನ್ನು ಪೊಲೀಸರು ಬಂಧಿಸಿದ್ದಾರೆ.
ಲೋಕೇಶ್ ಕೋಡಿಕೆರೆ ಗ್ಯಾಂಗ್ನಿಂದ ಪ್ರತಿಕಾರಕ್ಕೆ ಯತ್ನ































