ಆನೆಗುಂದಿ ಶ್ರೀಗಳವರ ಪಟ್ಟಾಭಿಷೇಕ ವರ್ಧಂತಿ ಸಂಪನ್ನ

Picture of RB NEWS

RB NEWS

Bureau Report

ಪಡುಕುತ್ಯಾರು : ಶ್ರೀಮದ್ ಜಗದ್ಗುರು ಆನೆಗುಂದಿ ಮಹಾ ಸಂಸ್ಥಾನ ಸರಸ್ವತೀ ಪೀಠಾಧೀಶ್ವರ ಪರಮ ಪೂಜ್ಯ ಜಗದ್ಗುರು ಅನಂತ ಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾ ಸ್ವಾಮಿಗಳವರ 15ನೇ ವರ್ಷದ ಪಟ್ಟಾಭಿಷೇಕ ಮಹೋತ್ಸವದ ವರ್ಧಂತ್ಯುತ್ಸವವು ಇಂದು 2025ರ ಮೇ 22ರಂದು ಪಡುಕುತ್ಯಾರಿನ ಮಹಾಸಂಸ್ಥಾನದಲ್ಲಿ ಸಂಪನ್ನಗೊಂಡಿತು.
ಮೇ 22 ರಂದು ವರ್ಧಂತಿ ಉತ್ಸವದ ಅಂಗವಾಗಿ ಸಾಮೂಹಿಕ ಚಂಡಿಕಾಯಾಗ ವೈದಿಕ ಕಾರ್ಯಕ್ರಮಗಳು, ಧಾರ್ಮಿಕ ಸಭೆ, ವಾಸ್ತುಶಿಲ್ಪ ಮತ್ತು ಶಿಲ್ಪ ಕಲೆ ಸಾಧಕರಿಗೆ ರಾಷ್ಟ್ರೀಯ ಪ್ರಶಸ್ತಿ ಪ್ರಧಾನ, ಸಾಧಕರಿಗೆ ಆನೆಗುಂದಿ ಶ್ರೀ ಪ್ರಶಸ್ತಿ ಪ್ರಧಾನ, ಯುವಶಿಲ್ಪಿಗಳಿಗೆ ಅಭಿನಂದನೆ ನಡೆಯಿತು.


ಅಂದು ಬೆಳಿಗ್ಗೆ ಜಗದ್ಗುರುಗಳವರಿಂದ ಕಟಪಾಡಿ ಶ್ರೀಮಹಾಸಂಸ್ಥಾನದಲ್ಲಿ ಪಟ್ಟಾಭಿಷೇಕ ವರ್ಧಂತಿಯ ಸಂಬದಿತ ವಿವಿಧ ವೈದಿಕ ವಿಧಿ ವಿಧಾನಗಳ ನಡೆಯಿತು.

ಶ್ರೀಕರಾರ್ಚಿತ ದೇವತಾ ಪೂಜೆ ಬಳಿಕ ಕಟಪಾಡಿಯಲ್ಲಿರುವ ಅನಂತಶ್ರೀ ವಿಭೂಷಿತ ನಾಗಧರ್ಮೇಂದ್ರ ಸರಸ್ವತೀ ಮಹಾಸ್ವಾಮಿಗಳವರ ವೃಂದಾವನದಲ್ಲಿ ಜಗದ್ಗುರುಗಳವರಿಂದ ಪೂಜೆ ನಡೆಯಿತು.ಬಳಿಕ ಪಡುಕುತ್ಯಾರಿನ ಶ್ರೀ ಸರಸ್ವತೀ ಯಾಗ ಶಾಲೆಯಲ್ಲಿ ಶ್ರೀ ವಿಶ್ವಕರ್ಮ ಯಜ್ಞ, ಶ್ರೀ ದಕ್ಷಿಣಾಮೂರ್ತಿ ಯಜ್ಞ, ಶ್ರೀ ರುದ್ರ ಯಜ್ಞ, ಸಾಮೂಹಿಕ ಶ್ರೀ ಚಂಡಿಕಾ ಯಾಗ ಪೂರ್ಣಾಹುತಿ ನಡೆಯಿತು. ನಂತರ ಆನೆಗುಂದಿ ಪ್ರತಿಷ್ಠಾನದ ವತಿಯಿಂದ ಜಗದ್ಗುರುಗಳವರ ಪಾದಪೂಜೆಯ ಬಳಿಕ ಮಹಾಸಂಸ್ಥಾನದ ಪ್ರಥಮ ವಿಶ್ವಸ್ಥರಾಗಿರುವ ದೇವಸ್ಥಾನಗಳ ಧರ್ಮದರ್ಶಿಗಳವರಿಂದ, ವಾಡಿಕೆಯಂತೆ ಆಯಾ ದೇವಸ್ಥಾನಗಳ ವತಿಯಿಂದ ಜಗದ್ಗುರುಗಳವರಿಗೆ ಫಲನ್ಯಾಸ, ದೇವಸ್ಥಾನಗಳಲ್ಲಿ ವಾರ್ಷಿಕ ಸಂಗ್ರಹಿತ ಗುರುಕಾಣಿಕೆ ಸಮರ್ಪಣೆ ಪಟ್ಟಾಭಿಷೇಕ ವರ್ಧಂತಿಯ ವಿಧಿ ವಿಧಾನಗಳ ನಡೆಯಿತು.

ಮೋರ್ಸಿಂಗ್‌ ಸಾಮ್ರಾಟ್‌ ವಿದ್ವಾನ್‌ ಎಲ್‌ ಭೀಮಾಚಾರ್‌ ಮಕ್ಕಳಾದ ವಿದ್ವಾನ್‌ ರಾಜಶೇಖರ ಎಲ್‌ ಭೀಮಾಚಾರ್‌ ಬೆಂಗಳೂರು ವಿದುಷಿ ಭಾಗ್ಯಲಕ್ಷ್ಮೀ ಕೃಷ್ಣ ತಂಡದವರಿಂದ ಮೋರ್ಸಿಂಗ್‌ ತರಂಗಲಯ ಕಾರ್ಯಕ್ರಮ ನಡೆಯಿತು.

ನಂತರ ನಡೆಯು ಧಾರ್ಮಿಕ ಸಭೆಯಲ್ಲಿ ಪಡುಕುತ್ಯಾರು ಮಹಾಸಂಸ್ಥಾನದ ಶ್ರೀ ಸರಸ್ವತೀ ಸತ್ಸಂಗ ಮಂದಿರ ಧರ್ಮ ಸಭೆಯಲ್ಲಿ ಪರಮಪೂಜ್ಯ ಜಗದ್ಗುರು ಅನಂತಶ್ರೀವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮೀಜಿಗಳವರು ಆಶೀರ್ವಚನ ನೀಡಿದರು.
ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠ ಪ್ರತಿಷ್ಠಾನದ ಉಪಾಧ್ಯಕ್ಷ ಶ್ರೀ ಕೆ. ಪ್ರಭಾಕರ ಆಚಾರ್ಯ ಮಧೂರು, ಅವರು ಸಭೆಯ ಅಧ್ಯಕ್ಷತೆ ವಹಿಸಿದ್ದರು.

ಇದೇ ವೇಳೆ ಚಾಳುಕ್ಯ ಶಿಲ್ಪಿ ಲಿಪಿಕಾರ ಶ್ರೀ ಅಕ್ಷರಮೇರು ದಾಮೋದರಾಚಾರಿ ಸಾಹಿತ್ಯ ಸರಸ್ವತೀ ಸಮ್ಮಾನ್‌ ರಾಷ್ಟ್ರೀಯ ಪ್ರಶಸ್ತಿ,ಮಹಾ ಶಿಲ್ಪಿ ಶ್ರೀ ಗುಂಡನ್‌ ಅನಿವಾರಿತಾಚಾರಿ ತ್ರಿಭುವನಾಚಾರಿ ರಾಷ್ಟ್ರೀಯ ಪ್ರಶಸ್ತಿ ,ಹೊಯ್ಸಳ ಮಹಾಶಿಲ್ಪಿ ಮಲ್ಲಿಂತಮ ರಾಷ್ಟ್ರೀಯ ಪ್ರಶಸ್ತಿ, ವಾಸ್ತು ಪಿತಾಮಹನ್ ಸ್ವರ್ವಸಿದ್ಧಿ ಆಚಾರಿ ರಾಷ್ಟ್ರೀಯ ಪ್ರಶಸ್ತಿ ಹಾಗೂ ಆನೆಗುಂದಿಶ್ರೀ ಪ್ರಶಸ್ತಿ ಪ್ರದಾನ ನಡೆಯಿತು.

ಎಸ್‌ ಕೆ ಎಫ್‌ ಸಮೂಹ ಸಂಸ್ಥೆಗಳು ಬನ್ನಡ್ಕ ಮೂಡಬಿದ್ರೆ ಇವರು ನಿರ್ಮಿಸಿದ ಪಂಚಶಿಲ್ಪಗಳಲ್ಲಿ ಆಧುನಿಕತೆ ವಿನೂತನ ತಾಂತ್ರಿಕತೆ ನವನವೀನ ಆವಿಷ್ಕಾರ ಕುರಿತು ಮಹಾಸಂಸ್ಥಾನದ ಕಿರು ಸಾಕ್ಷ್ಯ ಚಿತ್ರ ಮಹಾಶಿಲ್ಪಿ ಲೋಕಾರ್ಪಣೆ ನಡೆಯಿತು.

ಸಭೆಯಲ್ಲಿ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಸಮಿತಿ ಅದ್ಯಕ್ಷರಾದ ಮೂಡಬಿದ್ರೆ ಎಸ್.‌ ಕೆ. ಎಫ್‌ ಎಲಿಕ್ಸರ್‌ ಪ್ರೈವೇಟ್‌ ಲಿಮಿಟೆಡ್‌ ಸಂಸ್ಥಾಪಕರಾದ ಡಾ. ಜಿ.ರಾಮಕೃಷ್ಣ ಆಚಾರ್‌, ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಸಮಿತಿ ಸಂಚಾಲಕ ಡಾ. ಬಿ.ಶ್ರೀಕಂಠಾಚಾರ್ ಇ.ಎಂ.ಆರ್.ಸಿ. ಮೈಸೂರು ವಿಶ್ವವಿದ್ಯಾನಿಲಯ, ಮುಖ್ಯ ಅತಿಥಿಗಳಾಗಿ ಭಾಗವಹಿದ್ದರು.

ಧರ್ಮಸಭೆಯಲ್ಲಿ ಚಾತುರ್ಮಾಸ್ಯ ವ್ರತ ನಿರ್ವಹಣಾ ಸಮಿತಿ ಗೌರವಾಧ್ಯಕ್ಷ ಶ್ರೀ ಪಿ ವಿ ಗಂಗಾಧರ ಆಚಾರ್ಯ ಉಡುಪಿ ಕುತ್ಯಾರು ಗ್ರಾಮ ಪಂಚಾಯತ್ ಆಧ್ಯಕ್ಷ ಶ್ರೀ ಜನಾರ್ದನ ಆಚಾರ್ಯ ಕಳತ್ತೂರು ಆನೆಗುಂದಿ ಮೂಲ ಮಠ ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠ ಪಂಚಸಿಂಹಾಸನ ವಿಕಾಸ ಸಮಿತಿ ಅಧ್ಯಕ್ಷ ದಿನೇಶ್‌ ಆಚಾರ್ಯ ಪಡುಬಿದ್ರಿ , ಶ್ರೀ ನಾಗರಾಜ ಆಚಾರ್ಯ ಕಾಡಬೆಟ್ಟು, ಕರಾವಳಿ, ಬೆಂಗಳೂರು, ಹುಬ್ಬಳ್ಳಿ, ಮುಂಬೈ ಕಾಳಿಕಾಂಬಾ ದೇವಾಲಯಗಳ ಧರ್ಮದರ್ಶಿ ಧರ್ಮದರ್ಶಿಗಳಾದ ಶ್ರೀ ಕಳಿ ಚಂದ್ರಯ್ಯ ಆಚಾರ್ಯ ಉಪ್ರಳ್ಳಿ, ಶ್ರೀ ಮಧುಕರ ಚಂದ್ರಶೇಖರ ಆಚಾರ್ಯ ಗೋಕರ್ಣ , ಶ್ರೀ ಬಾಲಕೃಷ್ಣ ಆಚಾರ್ಯ ಮೂಡಬಿದ್ರೆ, ಶ್ರೀ ಶಿಲ್ಪಿ ರಾಮಚಂದ್ರ ಆಚಾರ್ಯ ಕಾರ್ಕಳ,,ಶ್ರೀ ಗಣೇಶ ಆಚಾರ್ಯ, ಕಾಪು ,ಶ್ರೀ ಕೆ. ಸುಧಾಕರ ಆಚಾರ್ಯ, ಕೊಲಕಾಡಿ,ಶ್ರೀ ಬಿ.ಎಂ ಯದುನಂದನ ಆಚಾರ್ಯ ಬಂಗ್ರಮಂಜೇಶ್ವರ ಶ್ರೀ ಜನಾರ್ದನ ಆಚಾರ್ಯ ಆರಿಕ್ಕಾಡಿ,ಶ್ರೀ ಗಜಾನನ ಆರ್‌ . ಆಚಾರ್ಯ ಭಟ್ಕಳ, ಶ್ರೀ ದತ್ತಾ ಎಂ ಆಚಾರ್ಯ ಅಂಕೋಲ ಇವರು ಭಾಗವಹಿಸಿದ್ದರು.
ಮಹಾಸಂಸ್ಥಾನದ ವಿವಿಧ ಸಮಿತಿಗಳ ಪ್ರಮುಖರಾದ ಶ್ರೀ ಬಿ.ಸೂರ್ಯಕುಮಾರ್ ಆಚಾರ್ಯ ಹಳೆಯಂಗಡಿ, ಶ್ರೀ ಗಣೇಶ್‌ ಆಚಾರ್ಯ ಕೆಮ್ಮಣ್ಣು, ಶ್ರೀ ಸುಂದರ ಆಚಾರ್ಯ ಬೆಳುವಾಯಿ, ಶ್ರೀಮತಿ ಸಂಧ್ಯಾ ಲಕ್ಷ್ಮಣ ಆಚಾರ್ಯ ಉಡುಪಿ, ಆನೆಗುಂದಿ ಶಾಖಾ ಮಠ ಸಮಿತಿ ಬೆಂಗಳೂರು ಅಧ್ಯಕ್ಷ ಶ್ರೀ ಹರಿಶ್ಚಂದ್ರ ಎನ್. ಆಚಾರ್ಯ ಬೆಂಗಳೂರು, ಸಂಘಸಂಸ್ಥೆಗಳ ಪ್ರಮುಖರಾದ ಶ್ರೀ ಜಿ.ಟಿ ಆಚಾರ್ಯ ಮುಂಬಯಿ,ಶ್ರೀ ಯು.ಎಸ್.ಗಿರೀಶ್ ಆಚಾರ್ಯ ಕೊಯಂಬುತ್ತೂರು ಇವರ ಉಪಸ್ಥಿತಿಯಲ್ಲಿ ಸಮಾರಂಭ ಸಂಪನ್ನಗೊಂಡಿತು.
ಲೋಕೇಶ್ ಎಂ.ಬಿ ಆಚಾರ್ ಕಂಬಾರು ಪ್ರಧಾನ ಕಾರ್ಯದರ್ಶಿ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಕೋಶಾಧಿಕಾರಿ ಅರವಿಂದ್ ವೈ ಆಚಾರ್ಯ, ಬೆಳುವಾಯಿ ವಂದಿಸಿದರು.
ನ್ಯಾಯವಾದಿ ಕೆ ಎಂ ಗಂಗಾಧರ ಕೊಂಡೆವೂರು, ಸ್ವಾತಿ ಆಚಾರ್ಯ ಅಂಬಲಪಾಡಿ ಕಾರ್ಯಕ್ರಮ ನಿರೂಪಿಸಿದರು.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top