26ನೇ ಯೂತ್ ನ್ಯಾಷನಲ್ಸ್ ಕ್ರೀಡಾಕೂಟಕ್ಕೆ ಆಯ್ಕೆಯಾದ ದ್ರುವಿ

Picture of RB NEWS

RB NEWS

Bureau Report

ಕಾರ್ಕಳ : ರಾಜಗೃಹ, ಸಾಂತ್ರಬೆಟ್ಟು, ಕಾರ್ಕಳ ನಿವಾಸಿಯಾದ ದ್ರುವಿ ಅವರು 2026ರ ಮಾರ್ಚ್ 15ರಿಂದ 20ರವರೆಗೆ KIIT University, ಭುವನೇಶ್ವರ, Odisha ನಲ್ಲಿ ನಡೆಯಲಿರುವ 26ನೇ ಯೂತ್ ನ್ಯಾಷನಲ್ಸ್ ಕ್ರೀಡಾಕೂಟದಲ್ಲಿ ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಲು ಆಯ್ಕೆಯಾಗಿದ್ದಾರೆ.
ಈ ಪ್ರತಿಷ್ಠಿತ ಕ್ರೀಡಾಕೂಟದಲ್ಲಿ ದೇಶದ ವಿವಿಧ ರಾಜ್ಯಗಳಿಂದ ಆಯ್ಕೆಯಾದ ಕ್ರೀಡಾಪಟುಗಳು ಭಾಗವಹಿಸಲಿದ್ದು, ರಾಜ್ಯ ಮಟ್ಟದಲ್ಲಿ ತಮ್ಮ ಕೌಶಲ್ಯವನ್ನು ಮೆರೆದ ದ್ರುವಿ ಅವರು ರಾಷ್ಟ್ರೀಯ ಮಟ್ಟದಲ್ಲಿ ಕರ್ನಾಟಕವನ್ನು ಪ್ರತಿನಿಧಿಸುವ ಅವಕಾಶ ಪಡೆದಿದ್ದಾರೆ. ಇವರ ಆಯ್ಕೆ ಸ್ಥಳೀಯ ಕ್ರೀಡಾ ವಲಯಕ್ಕೆ ಹೆಮ್ಮೆಯ ವಿಷಯವಾಗಿದೆ.
ದ್ರುವಿ ಅವರ ಸಾಧನೆಗೆ ಕುಟುಂಬಸ್ಥರು, ಸ್ನೇಹಿತರು ಹಾಗೂ ಸ್ಥಳೀಯರು ಹರ್ಷ ವ್ಯಕ್ತಪಡಿಸಿದ್ದಾರೆ. ರಾಷ್ಟ್ರೀಯ ಮಟ್ಟದ ಸ್ಪರ್ಧೆಯಲ್ಲಿ ಅವರು ಉತ್ತಮ ಪ್ರದರ್ಶನ ನೀಡುವ ಮೂಲಕ ರಾಜ್ಯಕ್ಕೆ ಕೀರ್ತಿ ತರುತ್ತಾರೆ ಎಂಬ ವಿಶ್ವಾಸ ವ್ಯಕ್ತವಾಗಿದೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top