ಆರ್‌ಸಿಬಿ ತಂಡದ ಗೆಲುವಿನ ಸಂಭ್ರಮಾಚರಣೆ : ಕಾಲ್ತುಳಿತಕ್ಕೆ ಸಾವಿನ ಸಂಖ್ಯೆ11ಕ್ಕೆ ಏರಿಕೆ

Picture of RB NEWS

RB NEWS

Bureau Report

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಇಂದು (ಬುಧವಾರ) ಸಂಜೆ ದುರಂತ ಸಂಭವಿಸಿದೆ.

ಐಪಿಎಲ್ ಪಂದ್ಯಾಟದಲ್ಲಿ 18 ವರ್ಷಗಳ ಬಳಿಕ ಚೊಚ್ಚಲ ಬಾರಿಗೆ ರಾಯಲ್ ಚಾಲೆಂಜರ್ಸ್‌ ಬೆಂಗಳೂರು (ಆರ್‌ಸಿಬಿ) ತಂಡ ಗೆದ್ದಿರುವ ಹಿನ್ನೆಲೆ ರಾಜ್ಯ ಸರ್ಕಾರದಿಂದ ಆಟಗಾರರಿಗೆ ಸನ್ಮಾನ ಕಾರ್ಯಕ್ರಮ ವಿಧಾನಸೌಧದ ಮುಂಭಾಗದಲ್ಲಿ ಆಯೋಜಿಸಲಾಗಿತ್ತು.

ವಿಧಾನಸೌಧದದ ಕಾರ್ಯಕ್ರಮದ ಬಳಿಕ, ಸಂಜೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭ್ರಮಾಚರಣೆ ಕಾರ್ಯಕ್ರಮ ನಿಗದಿಯಾಗಿತ್ತು. ಇದರಲ್ಲಿ ಪಾಲ್ಗೊಳ್ಳಲು ಭಾರೀ ಸಂಖ್ಯೆಯಲ್ಲಿ ಆರ್‌ಸಿಬಿ ಅಭಿಮಾನಿಗಳು ಆಗಮಿಸಿದ್ದರು. ಈ ವೇಳೆ ಸ್ಟೇಡಿಯಂ ಗೇಟ್ ಬಳಿ ನೂಕುನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿದೆ.

ವಿಧಾನಸೌಧದ ಮೆಟ್ಟಿಲ ಬಳಿ ಆಯೋಜಿಸಿದ್ದ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಆದಿಯಾಗಿ ಗಣ್ಯರು ಆರ್‌ಸಿಬಿ ಆಟಗಾರರನ್ನು ಅಭಿನಂದಿಸಿದ್ದಾರೆ.

ಇತ್ತೀಚಿನ ವರದಿ ಪ್ರಕಾರ, ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ.

ಕಾಲ್ತುಳಿತದ ಗಾಯಾಳುಗಳನ್ನು ಶಿವಾಜಿನಗರದ ಬೌರಿಂಗ್-ಲೇಡಿ ಕರ್ಜನ್ ಆಸ್ಪತ್ರೆ ಮತ್ತು ವಿಠಲಮಲ್ಯ ರಸ್ತೆಯ ವೈದೇಹಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಈ ಎರಡೂ ಆಸ್ಪತ್ರೆಗಳಲ್ಲಿ ಸಾವು ಸಂಭವಿಸಿದೆ.

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ವಿಜಯೋತ್ಸವ ಸಂದರ್ಭದಲ್ಲಿ ದೊಡ್ಡ ಪ್ರಮಾಣದ ದುರಂತ ಸಂಭವಿಸಿದೆ.
ಕಾಲ್ತುಳಿತಕ್ಕೆ ಒಳಗಾಗಿ 11ಜನರು ಮೃತಪಟ್ಟಿದ್ದಾರೆ. 47 ಮಂದಿ ಗಾಯಗೊಂಡಿದ್ದಾರೆ. ಸಾವಿಗೀಡಾದವರಲ್ಲಿ ಹೆಚ್ಚಿನವರು ಯುವ ವಯಸ್ಸಿನವರು. ಮೃತಪಟ್ಟವರ ಕುಟುಂಬದವರ ವಾರೀಸುದಾರರಿಗೆ ರೂ.10 ಲಕ್ಷ ಪರಿಹಾರವಾಗಿ ನೀಡಲಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top