ಅಕ್ರಮವಾಗಿ ಜಾನುವಾರು ಸಾಗಾಟ: ಮೂವರ ಬಂಧನ
ಉಡುಪಿ: ಅಕ್ರಮವಾಗಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ಮೂರು ಆರೋಪಿಗಳನ್ನು ಬೈಂದೂರು ಠಾಣಾಧಿಕಾರಿ ತಿಮ್ಮೇಶ ಬಿ.ಎನ್ ನೇತೃತ್ವದಲ್ಲಿ ಪೊಲೀಸರು ಬಂಧಿಸಿದ್ದಾರೆ.




ಭಟ್ಕಳದ ನಿವಾಸಿ ಅಬ್ರಾರುಲ್ ಹಾಕ್ ಮೋಮಿನ್ (30), ಮೊಹಮ್ಮದ್ ಹಾಗೂ ಮೊಹಮ್ಮದ್ ಆರೀಫ್ ಬಂಧಿತ ಆರೋಪಿಗಳು.
ಆರೋಪಿಗಳು ಕೊಲ್ಲೂರಿನಿಂದ ಭಟ್ಕಳ ಕಡೆಗೆ ಈಚರ್ ವಾಹನದಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದರು.
ಈ ಬಗ್ಗೆ ಖಚಿತ ಮಾಹಿತಿ ಪಡೆದು ಕಾರ್ಯಾಚರಣೆಗೆ ಇಳಿದ ಬೈಂದೂರು ಪೊಲೀಸರು, ವಾಹನವನ್ನು ತಡೆದು ಮೂವರನ್ನು ಬಂಧಿಸಿದ್ದಾರೆ. ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 11 ಜಾನುವಾರಗಳನ್ನು ರಕ್ಷಿಸಲಾಗಿದೆ. ಜಾನುವಾರು ಸಾಗಾಟಕ್ಕೆ ಬೆಂಗಾವಲು ಆಗಿದ್ದ ಕಾರನ್ನು ವಶಪಡಿಕೊಳ್ಳಲಾಗಿದೆ.
ಈ ಬಗ್ಗೆ ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



































