ಪೊಲೀಸ್ ಇನ್‌ಸ್ಪೆಕ್ಟರ್‌ಗಳ ವರ್ಗಾವಣೆ

Picture of RB NEWS

RB NEWS

Bureau Report

ಮಂಗಳೂರು: ನಗರದ ವಿವಿಧ ಪೊಲೀಸ್ ಠಾಣೆಗಳ ಇನ್‌ಸ್ಪೆಕ್ಟರ್‌ಗಳನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.

ಉಡುಪಿ ಕರಾವಳಿ ಕಾವಲುಪಡೆ ಇನ್‌ಸ್ಪೆಕ್ಟರ್ ಪ್ರಮೋದ್ ಕುಮಾರ್ ಅವರನ್ನು ಸುರತ್ಕಲ್ ಠಾಣೆಗೆ, ಚಿಕ್ಕಮಗಳೂರು ಸೆನ್ ಠಾಣೆಯಿಂದ ಗವಿರಾಜು ಆರ್.ಪಿ. ಅವರನ್ನು ಗ್ರಾಮಾಂತರ ಪೊಲೀಸ್ ಠಾಣೆಗೆ, ಮಂಗಳೂರು ಕರಾವಳಿ ಕಾವಲು ಪಡೆಯಿಂದ ಅನಂತಪದ್ಮನಾಭ ಅವರನ್ನು ಪೂರ್ವ ಪೊಲೀಸ್ ಠಾಣೆಗೆ ವರ್ಗಾವಣೆಗೊಳಿಸಲಾಗಿದೆ.

ಮುಂಬಡ್ತಿ: ಪುಂಜಾಲಕಟ್ಟೆ ಠಾಣೆಯ ಪಿಎಸ್‌ಐ ನಂದಕುಮಾರ್ ಎಂ.ಎಸ್ ಅವರಿಗೆ ಇನ್‌ಸ್ಪೆಕ್ಟರ್ ಆಗಿ ಬಡ್ತಿ ನೀಡಿ ದ.ಕ. ಡಿಎಸ್‌ಬಿಗೆ ವರ್ಗಾಯಿಸಲಾಗಿದೆ. ಕರ್ನಾಟಕ ಲೋಕಾಯುಕ್ತಕ್ಕೆ ವರ್ಗಾವಣೆ ಆದೇಶದಲ್ಲಿದ್ದ ಗಣೇಶ್ ಕೆ.ಎಲ್. ಅವರನ್ನು ಆದೇಶ ಮಾರ್ಪಡಿಸಿ ಉಡುಪಿ ಕರಾವಳಿ ಕಾವಲು ಪಡೆಯ ಡಿವೈಎಸ್ಪಿ ಆಗಿ ವರ್ಗಾವಣೆ ಮಾಡಲಾಗಿದೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top