ವಿದ್ಯಾರ್ಥಿ ಸಂಘ ಉದ್ಘಾಟನೆ ಹಾಗೂ ವಿಶಿಷ್ಟ ಶ್ರೇಣಿಯ ಸಾಧಕರ ಅಭಿನಂದನೆ
ಕಾರ್ಕಳ : ಜ ಪೂರ್ವ ಸರಕಾರಿ ಪದವಿಪೂರ್ವ ಕಾಲೇಜು ಕಾರ್ಕಳ ಇಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘದ ಉದ್ಘಾಟನೆಯನ್ನು ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರು, ನಿವೃತ್ತ ಇಸ್ರೋ ವಿಜ್ಞಾನಿ ಇಡ್ಯಾ ಜನಾರ್ಧನ್ ನೆರವೇರಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಇದೇ ಸಂದರ್ಭದಲ್ಲಿ ಕಳೆದ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯ ಫಲಿತಾಂಶವನ್ನು ಸಾಧಿಸಿದ 12 ಜನ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭವು ಜರುಗಿತು. ಸಂಸ್ಥೆಯ ಸಾಧಕರನ್ನು ವೇದಿಕೆಯಲ್ಲಿ ಉಪಸ್ಥಿತರಿದ್ದ ಕಾಲೇಜು ಅಭಿವೃದ್ಧಿ ಸಮಿತಿಯ ಕೋಶಾಧಿಕಾರಿ ನಿತ್ಯಾನಂದ ಪೈ
ಸದಸ್ಯರಾದ ಶ್ರೀವರ್ಮ ಅಜರಿ , ಶ್ರೀನಿವಾಸ ಕಾರ್ಲ ಹಾಗೂ ನಿರಂಜನ್ ಜೈನ್ ಇವರುಗಳು ಪ್ರೋತ್ಸಾಹಕ ರೂಪದಲ್ಲಿ ಫಲ, ಪುಷ್ಪ ಸ್ಮರಣಿಕೆ ಹಾಗೂ ನಗದು ಪುರಸ್ಕಾರ ನೀಡಿ ಅಭಿನಂದಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸಂಸ್ಥೆಯ ಪ್ರಾಂಶುಪಾಲೆ ಅನ್ನಪೂರ್ಣ ಕಾಮತ್ ಇವರು ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿ ಶುಭ ಹಾರೈಸಿದರು.
ನಿವೃತ್ತ ಲೆಕ್ಕಪರಿಶೋಧಕ ಕಮಲಾಕ್ಷ ಕಾಮತ್ ಇವರು ವಿದ್ಯಾರ್ಥಿಗಳಿಗೆ ನೈತಿಕ ಮೌಲ್ಯಗಳ ಕುರಿತು ಜಾಗೃತಿಯನ್ನು ಮೂಡಿಸಿ ಮಾತನಾಡಿ ವಿದ್ಯಾರ್ಥಿ ಸಂಘದ ಚಟುವಟಿಕೆಗಳಿಗೆ ಶುಭ ಹಾರೈಸಿದರು.
ಹಿರಿಯ ಉಪನ್ಯಾಸಕಿ ಫ್ಯಾನಿ ಜಾಯ್ಸ್ ಸ್ವಾಗತಿಸಿದರು.
ಉಪನ್ಯಾಸಕ ಸದಾನಂದ ಸಾಧಕ ವಿದ್ಯಾರ್ಥಿಗಳನ್ನು ಪರಿಚಯಿಸಿ ಅಭಿನಂದಿಸಿದರು.
ಉಪನ್ಯಾಸಕಿ ಜಯಶ್ರೀ ಹೆಗ್ಡೆ ಇವರು ಕಾಲೇಜಿನಲ್ಲಿ ಇರುವ ವಿವಿಧ ಸಂಘಗಳ ಕಾರ್ಯ ಚಟುವಟಿಕೆಗಳ ಬಗ್ಗೆ ಸಂಕ್ಷಿಪ್ತ ಪರಿಚಯ ನೀಡಿದರು.
ಶೋಭಾ ಕುಮಾರಿ ಇವರ ವಂದನಾರ್ಪಣೆಗೈದರು. ವಿದ್ಯಾರ್ಥಿ ಸಂಘದ ಸಂಚಾಲಕಿ ಉಪನ್ಯಾಸಕಿ ಅಶ್ವಿನಿ ನಿರೂಪಿಸಿದರು.












