ಧರ್ಮಸ್ಥಳ ಪ್ರಕರಣ: ಎಸ್ಐಟಿ ತನಿಖೆಗೆ ಮುಖ್ಯಮಂತ್ರಿ ಅದೇಶ; ಐಪಿಎಸ್ ಅಧಿಕಾರಿ ಪ್ರಣವ್ ಮೊಹಾಂತಿ ಅವರ ನೇತೃತ್ವದ ತಂಡ ರಚನೆ

ಮುಖ್ಯಮಂತ್ರಿ ಸಿದ್ಧರಾಮಯ್ಯ

ಐಪಿಎಸ್ ಅಧಿಕಾರಿ ಪ್ರಣವ್ ಮೊಹಾಂತಿ
ಬೆಂಗಳೂರು : ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಕೊಲೆ ಪ್ರಕರಣಗಳ ಆರೋಪಗಳ ಕುರಿತ ತನಿಖೆಗೆ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸುವಂತೆ ಪೊಲೀಸ್ ಇಲಾಖೆ ಆದೇಶವನ್ನು ಹೊರಡಿಸಿದೆ.
ಐಪಿಎಸ್ ಅಧಿಕಾರಿ ಪ್ರಣವ್ ಮೊಹಾಂತಿ ಅವರ ನೇತೃತ್ವದ ತಂಡದಲ್ಲಿ ತನಿಖೆ ನಡೆಯಲಿದ್ದು, ನಾಲ್ವರು ಐಪಿಎಸ್ ಅಧಿಕಾರಗಳ ತಂಡವು ಈ ವಿಶೇಷ ತನಿಖಾ ತಂಡದಲ್ಲಿದೆ.

ಈ ತಂಡದಲ್ಲಿ ಅನುಚೇತ್, ಜಿತೇಂದ್ರ ಕುಮಾರ್ ಸೌಮ್ಯಲತಾ ಇದ್ದಾರೆ. ಸದ್ಯದಲ್ಲೇ ಹೈಪ್ರೊಫೈಲ್ ಪ್ರಕರಣದ ಬಗ್ಗೆ ತನಿಖೆ ಶುರು ಮಾಡಲಿದೆ ಎನ್ನಲಾಗಿದೆ.



SIT ತನಿಖೆಗೆ ಒತ್ತಾಯಿಸಿದ ನಿವೃತ್ತ ನ್ಯಾಯಮೂರ್ತಿ ಗೋಪಾಲಗೌಡ

ಬೆಂಗಳೂರು: ದ.ಕ. ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಅಪಾರ ಸಂಖ್ಯೆಯ ಅತ್ಯಾಚಾರ, ಕೊಲೆ ಮತ್ತು ಹೆಣಗಳನ್ನು ಹೂತು ಹಾಕಿರುವ ಪ್ರಕರಣದಲ್ಲಿ ಸಾಕ್ಷಿ ದೂರುದಾರನಿಗೆ ರಾಜ್ಯ ಸರಕಾರವು ತಕ್ಷಣವೇ ಭದ್ರತೆ ಒದಗಿಸಬೇಕು. ಆರೋಪಗಳ ತನಿಖೆಗೆ ವಿಶೇಷ ತನಿಖಾ ತಂಡ(SIT) ರಚಿಸಬೇಕು’ ಎಂದು ನಿವೃತ್ತ ನ್ಯಾಯಮೂರ್ತಿ ಗೋಪಾಲಗೌಡ ಒತ್ತಾಯಸಿದ್ದಾರೆ.

ಅನಾಮಿಕ ವ್ಯಕ್ತಿ ದೂರುದಾರ…
ಈ ಕುರಿತು ಅವರು ಪ್ರೆಸ್ ಕ್ಲಬ್ ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ, ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಹೇಳಿಕೆ ದಾಖಲಿಸಿದ ನಂತರವೂ, ತನಿಖೆ ಸರಿಯಾಗಿ ಆಗುತ್ತಿಲ್ಲ. ಮೃತದೇಹಗಳನ್ನು ಎಲ್ಲಿ ಹೂಳಲಾಗಿದೆ ಎಂಬುದನ್ನು ಖಾಲಿ ಹಾಳೆಯಲ್ಲಿ ಗುರುತು ಮಾಡಿಕೊಡು ಎಂದು ಪೊಲೀಸರು ಸಾಕ್ಷಿ ಫಿರ್ಯಾದಿಯ ಮೇಲೆ ಒತ್ತಡ ಹೇರುತ್ತಿದ್ದಾರೆ. ಆತ ನೀಡಿರುವ ಹೇಳಿಕೆಗಳು ಸೋರಿಕೆಯಾಗುತ್ತಿವೆ’ ಎಂದು ಕಳವಳ ವ್ಯಕ್ತಪಡಿಸಿದರು.
ಸಾಕ್ಷಿ ದೂರುದಾರ ತನ್ನ ವಕೀಲರೊಂದಿಗೆ ಒಂದು ಸ್ಥಳಕ್ಕೆ ತೆರಳಿ, ಕಳೇಬರವನ್ನು ತೆಗೆಯುವುದಾಗಿ ನ್ಯಾಯಾಲಯ ಮತ್ತು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಹೀಗಿದ್ದೂ ಪೊಲೀಸರು ಸ್ಥಳಕ್ಕೆ ತೆರಳಿಲ್ಲ. ಹೀಗಾಗಿ ತಕ್ಷಣವೇ ತನಿಖಾ ತಂಡವನ್ನು ಬದಲಿಸಬೇಕು. ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರ (ADGP) ಮಟ್ಟದ ಪೊಲೀಸ್ ಅಧಿಕಾರಿ, ಹೈಕೋರ್ಟ್ ಅಥವಾ ಸುಪ್ರೀಂ ಕೋರ್ಟ್ ನ ಹಾಲಿ ಅಥವಾ ನಿವೃತ್ತ ನ್ಯಾಯಮೂರ್ತಿಯ ಮೇಲ್ವಿಚಾರಣೆಯಲ್ಲಿ ಎಸ್ಐಟಿ ರಚಿಸಬೇಕು’ ಎಂದು ಒತ್ತಾಯಿಸಿದರು.






































