ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ವಿದ್ಯಾ ಸಂಸ್ಥೆಯಲ್ಲಿ ಏರ್ಪಟ್ಟಿದ್ದ ಪತ್ರಿಕಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಪತ್ರಿಕಾ ವಿತರಕನೊಬ್ಬನಿಗೆ ಸನ್ಮಾನ ಮಾಡಲಾಯಿತು. ಸದಾಶಿವ ಪಾಟ್ಕರ್ ಎನ್ನುವವರು ಕಾರ್ಕಳ ಬಸ್ ನಿಲ್ದಾಣದಲ್ಲಿ ಪತ್ರಿಕೆ ಮಾರಾಟ ಮಾಡುವ ಪುಟ್ಟ ಅಂಗಡಿಯನ್ನು ಇಟ್ಟುಕೊಂಡಿದ್ದಾರೆ. ಅವರು ಏಳನೆಯ ತರಗತಿಯಲ್ಲಿ ಓದುತ್ತಿರುವಾಗ ಮುಂಬೈನಲ್ಲಿ ರೈಲಿನ ಹೊಡೆತಕ್ಕೆ ಸಿಲುಕಿ ತನ್ನ ಎಡಗೈಯನ್ನು ಕಳೆದುಕೊಂಡಿದ್ದರು. ಕ್ರಿಯೇಟಿವ್ ವಿದ್ಯಾ ಸಂಸ್ಥೆಯ ಕಡೆಯಿಂದ ಹತ್ತು ಸಾವಿರ ರೂಪಾಯಿಗಳನ್ನು ನೀಡಿ ಪುರಸ್ಕರಿಸಲಾಯಿತು. ಶಿಕ್ಷಣ ಸಂಸ್ಥೆಯ ಸ್ಥಾಪಕರಾಗಿರುವ ಅಶ್ವತ್ ಎಚ್. ಎಲ್. ಅವರು ಚೆಕ್ ಅನ್ನು ಹಸ್ತಾಂತರಿಸಿದರು. –ವಿ. ಕೆ. ವಾಲ್ಪಾಡಿ