ಸೆ. 13ರಂದು ಲೋಕ‌ ಅದಾಲತ್

Picture of RB NEWS

RB NEWS

Bureau Report

ಕಾರ್ಕಳ : ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ನಿರ್ದೇಶನದ ಮೇರೆಗೆ ಸೆ. 13 ರಂದು ಬೆಳಿಗ್ಗೆ 10-00 ಗಂಟೆಯಿಂದ ಸಂಜೆ 5-00 ಗಂಟೆಯವರೆಗೆ ಕಾರ್ಕಳದ ನ್ಯಾಯಾಲಯಗಳ ಸಂಕೀರ್ಣದಲ್ಲಿ ರಾಷ್ಟ್ರೀಯ ಲೋಕ ಅದಾಲತ್‌ನ್ನು ಆಯೋಜಿಸಲಾಗಿದೆ.

ನ್ಯಾಯಾಲಯದಲ್ಲಿ ವಿಲೇವಾರಿಗೆ ಬಾಕಿ ಇರುವ ರಾಜಿಗೆ ಯೋಗ್ಯವಾದ ಎಲ್ಲಾ ಸಿವಿಲ್ ಮತ್ತು ಕ್ರಿಮಿನಲ್ (Compoundable) ಪ್ರಕರಣಗಳನ್ನು ಸೂಕ್ತ ಸಮಾಲೋಚಕರು ಮತ್ತು ತಮ್ಮ ವಕೀಲರ ಮೂಲಕ ರಾಜಿ ಮಾಡಿಕೊಳ್ಳಬಹುದಾಗಿದೆ.

ಆದ್ದರಿಂದ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಇದರ ಪೂರ್ಣ ಸದುಪಯೋಗವನ್ನು ಪಡೆದುಕೊಳ್ಳಬೇಕಾಗಿ ಈ ಮೂಲಕ ಕೋರಲಾಗಿದೆ.

ಸೆ 13ರಂದು ಲೋಕ್ ಅದಾಲತ್ ದಿನದಂದು ಟ್ರಾಫಿಕ್ ಚಲನ್ ಕೇಸುಗಳಿಗೆ ದಂಡವನ್ನು ಶೇ.‌50 ಕಡಿತಗೊಳಿಸಿ ವಿಧಿಸಲಾಗುವುದು ಎಂದು ಕಾರ್ಕಳ ತಾಲೂಕು ಕಾನೂನು ಸೇವೆಗಳ ಸಮಿತಿಯ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top