ನಾಡ ಹಬ್ಬ ದಸರಾಕ್ಕೆ ಮತಧರ್ಮದ ಬಂಧನ ಇಲ್ಲ : ಉಡುಪಿ ಜಿಲ್ಲಾ ವಕ್ತಾರ ಬಿಪಿನಚಂದ್ರ ನಕ್ರೆ

ಉಡುಪಿ: ಬಹು ಪ್ರತಿಷ್ಟಿತ ಅಂತರ್ರಾಷ್ಟ್ರೀಯ ಮಟ್ಟದ ಬೂಕರ್ ಪ್ರಶಸ್ತಿ ವಿಜೇತೆ ಭಾನು ಮುಸ್ತಾಖ್ ರವರು ನಾಡಹಬ್ಬ ದಸರಾವನ್ನು ಉದ್ಘಾಟಿಸುತ್ತಿರುವುದನ್ನು ವಿರೋಧಿಸುತ್ತಿರುವ ಬಿಜೆಪಿ ಸಂಘ ಪರಿವಾರದ ನಡೆ ಹಿಂದೂ ಧರ್ಮ ಪ್ರತಿಪಾದಿಸಿಕೊಂಡು ಬಂದ “ವಸುದೈವ ಕುಟುಂಬ” ಚಿಂತನೆಯ ಮಹಾ ಉಲ್ಲಂಘನೆ ಆಗಿದೆ. ನಾಡ ಹಬ್ಬ ದಸರಾಕ್ಕೆ ಮತಧರ್ಮದ ಬಂಧನ ಇಲ್ಲ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಬಿಪಿನಚಂದ್ರ ಪಾಲ್ ನಕ್ರೆ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.








