ಗೋಮಾಂಸ ಸಾಗಾಟ ವಾಹನಕ್ಕೆ ಬೆಂಕಿ ಹಚ್ಚಿದ ‘ಸಂಘ’ಟಕರು

Picture of RB NEWS

RB NEWS

Bureau Report

ಕಾಗವಾಡ(ಬೆಳಗಾವಿ) : ತಾಲೂಕಿನ ಐನಾಪುರ ಪಟ್ಟಣದಲ್ಲಿ ಸೋಮವಾರ ತಡರಾತ್ರಿ ಗೋಮಾಂಸ ಸಾಗಿಸುತ್ತಿದ್ದ ವಾಹನಕ್ಕೆ ಬೆಂಕಿ ಹಚ್ಚಲಾಗಿದೆ.

ರಾಯಬಾಗ ತಾಲ್ಲೂಕಿನ ಕುಡಚಿಯಿಂದ ಹೈದರಾಬಾದ್ ಕಡೆಗೆ ಮಾಂಸ ಸಾಗಿಸುತ್ತಿದ್ದ ವಾಹನ, ಐನಾಪುರ ದಾಟುತ್ತಿತ್ತು. ಅದರಲ್ಲಿ ಗೋಮಾಂಸ ಸಾಗಿಸುತ್ತಿದ್ದಾಗಿ ಶಂಕಿಸಿ, ಕೆಲವು ಕಾರ್ಯಕರ್ತರು ವಾಹನಕ್ಕೆ ಬೆಂಕಿ ಹಚ್ಚಿದ್ದಾರೆ. ಈ ಕಾರ್ಯಕರ್ತರು ಯಾವ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಪೊಲೀಸರು ಬರುವಷ್ಟರಲ್ಲಿ ವಾಹನ ಸುಟ್ಟು ಕರಕಲಾಗಿತ್ತು.

ಈ ಬಗ್ಗೆ ಪ್ರತಿಕ್ರಿಯಿಸಿದ ಎಸ್ಪಿ ಡಾ.ಭೀಮಾಶಂಕರ ಗುಳೇದ, ‘ಈ ಘಟನೆಗೆ ಸಂಬಂಧಿಸಿ ಎರಡು ಪ್ರಕರಣ ದಾಖಲಿಸಿದ್ದೇವೆ. ಗೋಹತ್ಯೆ ಕಾಯ್ದೆ ಮತ್ತು ಪ್ರಾಣಿ ಹಿಂಸೆ ತಡೆ ಕಾಯ್ದೆಯಡಿ ಮೂರು ಜನರನ್ನು ಬಂಧಿಸಿದ್ದೇವೆ. ಕಲಬುರಗಿಯಲ್ಲಿ ಈಗ ಮುಖ್ಯ ಆರೋಪಿ ಬಂಧನವಾಗಿದೆ. ಲಾರಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಐವರನ್ನು ಬಂಧಿಸಲಾಗಿದ್ದು, ಅವರ ಪಾತ್ರದ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ’ ಎಂದರು.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top