ಕಲ್ಲಡ್ಕದಲ್ಲಿ ಶಾರದಾ ಪೂಜಾ ಮಹೋತ್ಸವ
ಶ್ರೀ ಶಾರದಾ ಸೇವಾ ಪ್ರತಿಷ್ಠಾನ (ರಿ) ಕಲ್ಲಡ್ಕ ಶಾರದಾ ಪೂಜಾ ಮಹೋತ್ಸವದ ಧಾರ್ಮಿಕ ಸಭಾ ಕಾರ್ಯಕ್ರಮ, ಗ್ರಾಮ ಗೌರವ ಹಾಗೂ ಶಾಂತ ಶ್ರೀ ಪ್ರಶಸ್ತಿ ಪ್ರಧಾನ
ಕಲ್ಲಡ್ಕ: ಬಂಟ್ವಾಳ ತಾಲೂಕಿನ ಶ್ರೀ ಶಾರದಾ ಸೇವಾ ಪ್ರತಿಷ್ಠಾನ (ರಿ.) ಕಲ್ಲಡ್ಕ ವತಿಯಿಂದ ಕಲ್ಲಡ್ಕ ಮಾದರಿ ಹಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ನಡೆಯುತ್ತಿರುವ 48 ವರ್ಷದ ಶ್ರೀ ಶಾರದಾ ಪೂಜಾ ಮಹೋತ್ಸವದ ಧಾರ್ಮಿಕ ಸಭಾ ಕಾರ್ಯಕ್ರಮ ಮಂಗಳವಾರ ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಜಗನ್ನಾಥ್ ಸಾಲಿಯಾನ್ ಎಚ್ ರವರ ಅಧ್ಯಕ್ಷತೆಯಲ್ಲಿ ಜರಗಿತು.
ಪ್ರಧಾನ ಧಾರ್ಮಿಕ ಉಪನ್ಯಾಸ ಮಾಡಿದ ಅಖಿಲ ಭಾರತೀಯ ಸಾಹಿತ್ಯ ಪರಿಷತ್ ದಕ್ಷಿಣ ಕನ್ನಡ ಜಿಲ್ಲಾ ಸಹ ಕಾರ್ಯದರ್ಶಿ ಲತೇಶ್ ಬಾಕ್ರಬೈಲು ಮಾತನಾಡಿ ಮಕ್ಕಳಿಗೆ ಮನೆಯಲ್ಲಿ ಸಿಗುವ ಸಂಸ್ಕಾರದ ಕೊರತೆಯಿಂದಾಗಿ ಈಗಿನ ಜನಾಂಗ ನಾಗರಿಕ ಪ್ರಜ್ಞೆಯನ್ನು ಕಳೆದುಕೊಂಡಿದ್ದಾರೆ. ಜೊತೆಗೆ ನನ್ನ ದೇಶದ ಶ್ರೇಷ್ಠತೆಯ ಬಗ್ಗೆ ಹೆಮ್ಮೆ ಇರುವುದರಿಂದ ಸ್ವದೇಶಿ ಭಾವದ ಜಾಗೃತಿ ಮೂಡಿಸುವ ಅಗತ್ಯತೆ ಇದೆ ಎಂದರು.
ಈ ಸಂದರ್ಭದಲ್ಲಿ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ತರಗತಿಯಲ್ಲಿ 90 ಶೇಕಡಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಗೌರವಿಸಿ ಅಭಿನಂದಿಸಲಾಯಿತು.




























