ಅಕ್ರಮ ಜಾನುವಾರು ಸಾಗಾಟದಾರನಿಗೆ ಗುಂಡೇಟು!

ಪುತ್ತೂರು: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಆರೋಪಿಯ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ನಡೆದಿದೆ.
ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಆರೋಪಿ ಅಬ್ದುಲ್ಲಾ (40) ಎಂಬಾತನ ಕಾಲಿಗೆ ಗುಂಡು ಹಾರಿಸಲಾಗಿದೆ.

ಈಚರ್ ವಾಹನದಲ್ಲಿ 10 ಜಾನುವಾರಗಳನ್ನು ಸಾಗಿಸುತ್ತಿದ್ದ, ಅಬ್ದುಲ್ಲಾ ಚಾಲಕನಾಗಿದ್ದ, ಇನ್ನೊಬ್ಬ ಆರೋಪಿಯೂ ವಾಹನದಲ್ಲಿದ್ದ. ವಾಹನವನ್ನು ನಿಲ್ಲಿಸಲು ಪೊಲೀಸರು ಸೂಚಿಸಿದಾಗ ನಿಲ್ಲಿಸದೆ ಪರಾರಿಯಾಗಿದ್ದು, ಪೊಲೀಸರು ಸುಮಾರು 10 ಕಿಮೀ ಬೆನ್ನಟ್ಟಿದ್ದಾರೆ. ಆರೋಪಿ ಪೊಲೀಸ್ ಜೀಪಿಗೆ ಹಿಂಬದಿಯಿಂದ ವಾಹನ ಢಿಕ್ಕಿ ಹೊಡೆದಿದ್ದು, ಈ ವೇಳೆ ಪಿಎಸ್ಐ ಎರಡು ಸುತ್ತು ಗುಂಡುಗಳನ್ನು ಫೈರ್ ಮಾಡಿದ್ದಾರೆ. ಒಂದು ವಾಹನದ ಮೇಲೆ ಹಾಗೂ ಮತ್ತೊಂದು ಆರೋಪಿಯ ಕಾಲಿಗೆ ಬಿದ್ದಿದೆ.

*ಗೋಪೂಜೆ ದಿನದಂದೇ ನಡೆದ ಘಟನೆ*
ಈ ವೇಳೆ ಇನ್ನೊಬ್ಬ ಆರೋಪಿಯು ಸ್ಥಳದಿಂದ ಪರಾರಿ ಯಾಗಿದ್ದಾನೆ. ಆರೋಪಿ ಅಬ್ದುಲ್ಲ ಮೂಲತ ಕೇರಳದ ಕಾಸರಗೋಡಿನವನು ಎಂದು ತಿಳಿದು ಬಂದಿದೆ.


























