ತಲವಾರು ದಾಳಿ : ಇಬ್ಬರ ಬಂಧನ
ಉಡುಪಿ : ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೈಕ್ನಲ್ಲಿ ಹೋಗುತ್ತಿದ್ದ ವ್ಯಕ್ತಿಯ ಮೇಲೆ ತಲವಾರಿನಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಕಣಜಾರು ಪರಾರಿ ಮನೆಯ ಮಂಜುನಂದ್ ಹೆಗ್ಡೆ (49) ಮತ್ತು ಕೊಪ್ಪಳದ ಜಗದೀಶ್ ಹೆಗ್ಡೆ (48) ಬಂಧಿತರು.
ಆರೋಪಿಗಳು ಕೃತ್ಯಕ್ಕೆ ಬಳಸಲಾಗಿದ್ದ ಕಬ್ಬಿಣದ ರಾಡ್ ನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇಬ್ಬರೂ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಧೀಶರು ಅವರನ್ನು ನ್ಯಾಯಾಂಗ ಬಂಧನ ವಿಧಿಸಿದ್ದಾರೆ.
ಘಟನೆಯ ವಿವರ….





































