ಕ್ರೀಡಾಪಟು ಧನಲಕ್ಷ್ಮೀ ಅವರನ್ನು ಸನ್ಮಾನಿಸಿ ಗೌರವಿಸಿದ ಶಾಸಕ ವಿ.ಸುನೀಲ್ ಕುಮಾರ್

Picture of RB NEWS

RB NEWS

Bureau Report

ಕಾರ್ಕಳ : ಬಾಂಗ್ಲಾದೇಶದಲ್ಲಿ ನಡೆದ 2ನೇ ಮಹಿಳಾ‌ ಕಬ್ಬಡಿ ವಿಶ್ವಕಪ್- ಪಂದ್ಯಾಟದಲ್ಲಿ ಚಾಂಪಿಯನ್‌ ಆದ ಭಾರತ ತಂಡವನ್ನು ಪ್ರತಿನಿಧಿಸಿ ವಿಜಯಗಳಿಸಿ ದೇಶಕ್ಕೆ ಹೆಮ್ಮೆ ತಂದ ನಮ್ಮ ನಾಡಿನ ಹೆಮ್ಮೆಯ ಪ್ರತಿಭೆ ಮೂಲತಃ ಕಾರ್ಕಳ ಮಿಯ್ಯಾರು ಗ್ರಾಮದವರಾಗಿದ್ದು, ಪ್ರಸ್ತುತ ಸುರತ್ಕಲ್ ಗುಡ್ಡೆಕೊಪ್ಪದ‌ ನಿವಾಸಿಯಾಗಿರುವ ನಾರಾಯಣ ಪೂಜಾರಿ ಮತ್ತು ಶಶಿಕಲಾ ದಂಪತಿಗಳ ಪುತ್ರಿ ಧನಲಕ್ಷ್ಮೀ ಯವರನ್ನು ವಿಕಾಸ ಜನಸೇವಾ ಕಛೇರಿಯಲ್ಲಿ ಬಿಜೆಪಿ ಪ್ರಮುಖರೊಂದಿಗೆ ಶಾಸಕ ವಿ. ಸುನಿಲ್‌ ಕುಮಾರ್‌ ರವರು ಅಭಿನಂದಿಸಿದರು.

ಕ್ರಿಯೇಟಿವ್‌ ವಿದ್ಯಾ ಸಂಸ್ಥೆಯ ಸಹ ಸಂಸ್ಥಾಪಕರಾದ ಗಣನಾಥ್‌ ಶೆಟ್ಟಿ, ಅಶ್ವಥ್‌ ಎಸ್‌ ಎಲ್‌, ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್‌ ನಾಯಕ್‌, ಪ್ರಧಾನ ಕಾರ್ಯದರ್ಶಿ ಸತೀಶ್‌ ಬೋಳ, ಬಿಜೆಪಿ ಹಿರಿಯರಾದ ರವೀಂದ್ರ ಮಡಿವಾಳ, ಯುವ ಮೋರ್ಚಾ ಅಧ್ಯಕ್ಷ ರಾಕೇಶ್‌ ಶೆಟ್ಟಿ, ರೋಹಿತ್ ಶೆಟ್ಟಿ ಮಿಯ್ಯಾರು, ಮಹಿಳಾ ಮೋರ್ಚಾ ಪ್ರಮುಖರು ಹಾಗೂ ಪಕ್ಷದ ಪ್ರಮುಖರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top