ಪೊಲೀಸ್ ಕಾನ್ಸ್ಟೇಬಲ್ ನೇರ ನೇಮಕಾತಿ: 3395 ಹುದ್ದೆಗಳಿಗೆ ಅರ್ಜಿ ಆಹ್ವಾನ
RB NEWS
Bureau Report
ಪೊಲೀಸ್ ಕಾನ್ಸ್ಟೇಬಲ್ ನೇರ ನೇಮಕಾತಿ: 3395 ಹುದ್ದೆಗಳಿಗೆ ಅರ್ಜಿ ಆಹ್ವಾನ
ಕಾರ್ಕಳ : ಕರ್ನಾಟಕ ರಾಜ್ಯ ನಾಗರಿಕ ಪೊಲೀಸ್ ಕಾನ್ಸ್ಟೇಬಲ್ ನೇರ ನೇಮಕಾತಿ 2026 ರ 3395 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜುಲಾಯಿ 3 ಆಗಿರುತ್ತದೆ. ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾಯಕ್ರಮವನ್ನು, ಉಡುಪಿ ಜಿಲ್ಲಾ ಪೊಲೀಸ್ ಮತ್ತು ಕಾರ್ಕಳ ಪೊಲೀಸ್ ಇಲಾಖೆ ಆಶ್ರಯದಲ್ಲಿ ಹಾಗೂ ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಇವರ ಸಹಯೋಗದಲ್ಲಿ , ಜೂನ್ 29 ಸೋಮವಾರದಂದು ಸಂಜೆ 4 ಗಂಟೆಗೆ ಸರಿಯಾಗಿ ಮಂಜುನಾಥ ಪೈ ಸಭಾಭವನ ಕಾರ್ಕಳದಲ್ಲಿ ನಡೆಸಲಾಗುವುದು.
ವಿದ್ಯಾರ್ಥಿಗಳು ಹಾಗೂ ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಸದುಪಯೋಗವನ್ನು ಪಡೆದುಕೊಳ್ಳಬೇಕಾಗಿ ವಿನಂತಿ.