ಆಧುನಿಕ‌ ಜೀವ ರಕ್ಷಕ ಸವಲತ್ತುಗಳಿರುವ ಆ್ಯಂಬುಲೆನ್ಸ್ ಗಳನ್ನು ಲೋಕಾರ್ಪಣೆಗೈದ ಮುಖ್ಯಮಂತ್ರಿ

Picture of RB NEWS

RB NEWS

Bureau Report

ಬೆಂಗಳೂರು : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರದ “ಮುಖ್ಯಮಂತ್ರಿಗಳ ಆಪತ್ಕಾಲಾಯನ ಸೇವೆ”ಯ 65 ಆಧುನಿಕ‌ ಜೀವ ರಕ್ಷಕ ಸವಲತ್ತುಗಳಿರುವ ಆ್ಯಂಬುಲೆನ್ಸ್ ಗಳನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಲೋಕಾರ್ಪಣೆಗೈದರು.‌

ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಮಾತನಾಡಿ, ಅಪಘಾತದ ಸಂದರ್ಭದಲ್ಲಿ ಗೋಲ್ಡರ್ ಹವರ್ ಬಹಳ ಮುಖ್ಯ. ಈ‌ ಒಂದು ಗಂಟೆಯಲ್ಲಿ ಅಗತ್ಯ ತುರ್ತು ಚಿಕಿತ್ಸೆ ಸಿಕ್ಕರೆ ನೂರಾರು ಪ್ರಾಣಗಳನ್ನು ಉಳಿಸಲು ಸಾಧ್ಯವಿದೆ. ಈ ಪ್ರಾಣ ಉಳಿಸುವ ಕಾರ್ಯಕ್ಕೆ ಈ ಆ್ಯಂಬುಲೆನ್ಸ್ ಗಳು ನೆರವಾಗಲಿವೆ.

ಸದ್ಯ 65 ಆಧುನಿಕ ಮತ್ತು ಪ್ರಾಥಮಿಕ ಆ್ಯಂಬುಲೆನ್ಸ್ ಗಳನ್ನು ಲೋಕಾರ್ಪಣೆ ಮಾಡಿದ್ದೇವೆ. ಮುಂದಿನ‌ ದಿನಗಳಲ್ಲಿ ಇಡೀ ರಾಜ್ಯಕ್ಕೆ ಆಧುನಿಕ‌ ಸವಲತ್ತುಗಳಿರುವ ಆ್ಯಂಬುಲೆನ್ಸ್ ಗಳನ್ನು ವಿಸ್ತರಿಸಲಾಗುವುದು.

ಸಂಚಾರಿ ನಿಯಮಗಳನ್ನು ಶಿಸ್ತಿನಿಂದ ಪಾಲಿಸಿದರೆ ಬಹುತೇಕ ಅಪಘಾತಗಳು ಸಂಭವಿಸುವುದೇ ಇಲ್ಲ. ಯುವಜನರು ಕುಡಿದು ವಾಹನ ಓಡಿಸುವುದನ್ನು ನೂರಕ್ಕೆ ನೂರರಷ್ಟು ನಿಲ್ಲಿಸಿ, ನಿಮ್ಮ ಕುಟುಂಬಗಳನ್ನು ಅನಾಥ ಮಾಡಬೇಡಿ.

ಸಂಚಾರಿ ನಿಯಮ‌ ಪಾಲಿಸದೆ ವಾಹನ ಓಡಿಸುವವರ, ಕುಡಿದು ವಾಹನ ಚಲಾಯಿಸುವರ ಚಾಲನಾ ಪರವಾನಗಿಯನ್ನು ರದ್ದು ಮಾಡಬೇಕು ಎಂದು ಸಾರಿಗೆ ಇಲಾಖೆಗೆ ಈ ವೇದಿಕೆಯಲ್ಲೇ ಸೂಚಿಸುತ್ತಿದ್ದೇನೆ.

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಗ್ಯಾರಂಟಿ ಅನುಷ್ಠಾನ ಸಮಿತಿ ರಾಜ್ಯಾಧ್ಯಕ್ಷ ಎಚ್.ಎಂ.ರೇವಣ್ಣ ಸೇರಿ ಹಲವು ನಾಯಕರು ಮತ್ತು ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top