667 ಬೀದಿ ಬದಿ ವ್ಯಾಪಾರಿಗಳಿಗೆ ಹಂತ ಹಂತವಾಗಿ ವಿವಿಧ ವಲಯಗಳಲ್ಲಿ ವ್ಯಾಪಾರ ನಡೆಸಲು ಅವಕಾಶ

Picture of RB NEWS

RB NEWS

Bureau Report

ಮಂಗಳೂರು : ಸ್ಟೇಟ್ ಬ್ಯಾಂಕ್ ಬಳಿ 93 ಬೀದಿ ವ್ಯಾಪಾರಿಗಳಿಗೆ ಗುರುತಿನ ಚೀಟಿಯನ್ನು ವಿತರಿಸಲಾಗುತ್ತಿದ್ದು, ಎಲ್ಲಾ 667 ಬೀದಿ ಬದಿ ವ್ಯಾಪಾರಿಗಳಿಗೆ ಹಂತ ಹಂತವಾಗಿ ವಿವಿಧ ವಲಯಗಳಲ್ಲಿ ವ್ಯಾಪಾರ ನಡೆಸಲು ಅವಕಾಶ ನೀಡಲಾಗುವುದು ಎಂದು ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಘೋಷಿಸಿದ್ದಾರೆ.

ಮೇಯರ್ ಕಚೇರಿಯಲ್ಲಿ ಶುಕ್ರವಾರ ನಡೆದ ಫೋನ್ ಇನ್ ಕಾರ್ಯಕ್ರಮದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ‘ಆಪರೇಷನ್ ಟೈಗರ್’ಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಫುಟ್‌ಪಾತ್‌ಗಳಲ್ಲಿ ಬೀದಿಬದಿ ವ್ಯಾಪಾರಕ್ಕೆ ಅನುಮತಿ ನೀಡುವುದಿಲ್ಲ. ಆಪರೇಷನ್ ಟೈಗರ್ ಒಂದು ವರ್ಷಕ್ಕೆ ಒಪ್ಪಂದ ಮಾಡಿಕೊಂಡಿದ್ದು, ಮುಂದುವರೆಯಲಿದೆ ಎಂದು ಮೇಯರ್ ತಿಳಿಸಿದ್ದಾರೆ.

ವಲಯ ಆಯುಕ್ತೆ ರೇಖಾ ಶೆಟ್ಟಿ ಮಾತನಾಡಿ, ಸ್ಟೇಟ್ ಬ್ಯಾಂಕ್ ಬಳಿ ಹೂವಿನ ವ್ಯಾಪಾರಿಗಳು, ಅಲಂಕಾರಿಕ ವಸ್ತುಗಳ ಮಾರಾಟಗಾರರು, ತಿಂಡಿ ತಿನಿಸು ಮಾರಾಟಗಾರರು ಮತ್ತು ಹಣ್ಣು ತರಕಾರಿ ಮಾರಾಟಗಾರರಿಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. ಅವರಿಗೆ ಅಂಗಡಿಗಳ ಜೊತೆಗೆ ನೀರು ಮತ್ತು ವಿದ್ಯುತ್ ಪೂರೈಕೆಯನ್ನು ಒದಗಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top