ಕಾರವಾರದ ಪ್ರತಿಭಟನೆಯಲ್ಲಿ ಅಭಯಚಂದ್ರ ಜೈನ್
ಕಾರವಾರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರ ನಡೆಯನ್ನು ಖಂಡಿಸಿ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಜಿಲ್ಲಾಧಿಕಾರ ಕಚೇರಿಯ ಮುಂದೆ ಕಾಂಗ್ರೆಸ್ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು.
ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ವೀಕ್ಷಕ ಮಾಜಿ ಸಚಿವ ಅಭಯಚಂದ್ರ ಜೈನ್ ಭಾಗವಹಿಸಿದರು.
ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಾಂಕಾಳ ವೈದ್ಯ , ಮಾಜಿ ಸಚಿವ ಆರ್ ವಿ ದೇಶಪಾಂಡೆ , ಶಾಸಕ ಸತೀಶ್ ಸೈಲ್ , ಭೀಮಣ್ಣ ನಾಯ್ಕ , ಹಾಗೂ ಕಾಂಗ್ರೆಸ್ ನಾಯಕರಾದ ನಿವೇದಿತಾ ಆಳ್ವಾ ಮುಂತಾದವರು ಉಪಸ್ಥಿತರಿದ್ದರು.






































