ಸಹಾಯಹಸ್ತ ನೀಡುವ ನೇತಾಜಿ ಬ್ರಿಗೇಡ್ ತಂಡದ ಸಾಧನೆ ಶ್ಲಾಘನೀಯ-ಸಂಸದ ಕ್ಯಾ. ಬ್ರಿಜೇಶ್ ಚೌಟ

Picture of RB NEWS

RB NEWS

Bureau Report

ಮೂಡುಬಿದಿರೆ: ಕಂಬಳ ಸಂದರ್ಭದಲ್ಲಿ ವೇಷ ಹಾಕಿ ಸಂಗ್ರಹಿಸಿದ 20 ಲಕ್ಷಕ್ಕೂ ಹೆಚ್ಚು ಹಣವನ್ನು ಅಶಕ್ತ ಅನಾರೋಗಿ ಕುಟುಂಬಗಳಿಗೆ ನೀಡಿದೆ. ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕೆ ಉಚಿತ ಪುಸ್ತಕ ವಿತರಣೆ ಮಾಡಿದ್ದಾರೆ. ನಿರಂತರ 142 ವಾರ ಸ್ವಚ್ಛತಾ ಕಾರ್ಯ ಮಾಡಿದ್ದಾರೆ.ಇನ್ನು ಹಲವಾರು ಸಾಮಾಜಿಕ ಸತ್ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ನೇತಾಜಿ ಬ್ರಿಗೇಡ್ ತಂಡದ ಸಾಧನೆ ಶ್ಲಾಘನೀಯ ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದರು.

ಸ್ಥಳೀಯ ನೇತಾಜಿ ಬ್ರಿಗೇಡ್ ರ 5ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ಸಮಾಜ ಮಂದಿರದಲ್ಲಿ ಆಯೋಜಿಸಿದ ಉಚಿತ ವೈದ್ಯಕೀಯ ಶಿಬಿರ, ಚಿತ್ರಕಲಾ ಸ್ಪರ್ಧೆ ಕಾರ್ಯಕ್ರಮದಲ್ಲಿ ಸಹಾಯ ಧನ ವಿತರಣೆ,ಸಾಧಕರರಿಗೆ ಸಂಮಾನ ಮಾಡಿ ಮಾತನಾಡಿದರು.

ವೇದಿಕೆಯಲ್ಲಿ ಕಲ್ಲಬೆಟ್ಟು ಎಕ್ಸಲೆಂಟ್ ಸಂಸ್ಥೆಯ ಅಧ್ಯಕ್ಷ ಯುವರಾಜ್ ಜೈನ್, ಕೆ.ಎಂ.ಎಫ್. ಅಧ್ಯಕ್ಷ ಕೆ.ಪಿ.ಸುಚರಿತ ಶೆಟ್ಟಿ, ಮೂಡಾದ ಅಧ್ಯಕ್ಷ ಹರ್ಷವರ್ಧನ್ ಪಡಿವಾಳ್, ವಕೀಲ ಶಾಂತಿ ಪ್ರಸಾದ್ ಹೆಗ್ಡೆ, ಮಾಜಿ ಸಚಿವ ಅಭಯ ಚಂದ್ರ ಜೈನ್ ಉಪಸ್ಥಿತರಿದ್ದರು.

ಬ್ರಿಗೇಡ್ ನ ಅಧ್ಯಕ್ಷ ದಿನೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top