ಪಡುಬಿದ್ರೆ: ಲೋಕೋಪಯೋಗಿ ಸಚಿವರ ಸೂಚನೆಯ ಹಿನ್ನೆಲೆಯಲ್ಲಿ ಕಾರ್ಕಳ- ಪಡುಬಿದ್ರಿ ರಸ್ತೆಯ ಕಂಚನಡ್ಕದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಟೋಲ್ ಸಂಗ್ರಹ ಕೇಂದ್ರವನ್ನು ರದ್ದುಪಡಿಸುವ ಬಗ್ಗೆ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂಬ ಮಾಹಿತಿ ತಿಳಿದುಬಂದಿದೆ.
ಮಾಜಿ ಸಚಿವರು, ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷರಾದ ವಿನಯ್ ಕುಮಾರ್ ಸೊರಕೆ ಹಾಗೂ ಕಾಂಗ್ರೆಸ್ ಮುಖಂಡ ಮುನಿಯಾಲು ಉದಯಕುಮಾರ್ ಶೆಟ್ಟಿ ಅವರ ನೇತೃತ್ವದಲ್ಲಿ ಇಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಕಾಂಗ್ರೆಸ್ ಪಕ್ಷದ ನಾಯಕರು ನೀಡಿದ ಮನವಿ ಮೇರೆಗೆ ಈ ಟೋಲ್ ಕೇಂದ್ರವನ್ನು ರದ್ದುಗೊಳಿಸುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.