ಕಾರ್ಕಳ : ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಇದರ ವತಿಯಿಂದ 2024- 25 ನೇ ಶೈಕ್ಷಣಿಕ ಸಾಲಿನ ಕಾರ್ಕಳ ತಾಲೂಕು ಮಟ್ಟದ ಬಾಲಕ ಬಾಲಕಿಯರ ತ್ರೋಬಾಲ್ ಪಂದ್ಯಾಟವು ಬೈಲೂರು ಸರಕಾರಿ ಪದವಿ ಪೂರ್ವ ಕಾಲೇಜುನಲ್ಲಿ ನೆರವೇರಿತು.
ಶಾಸಕ ವಿ. ಸುನಿಲ್ ಕುಮಾರ್ ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡುತ್ತಾ, ಹೊಸ ಕ್ರೀಡಾ ಪ್ರತಿಭೆಗಳು ಬೆಳಕಿಗೆ ಬರಲಿ ಎಂದು ಹಾರೈಸಿದರು.
ವೇದಿಕೆಯಲ್ಲಿ ಬೈಲೂರು ಪಂಚಾಯತ್ ನ ಅಧ್ಯಕ್ಷ ಸಚ್ಚಿದಾನಂದ ಪ್ರಭು, ಲಯನ್ಸ್ ಕ್ಲಬ್ ಅಧ್ಯಕ್ಷ ಸುರೇಂದ್ರ ಪೂಜಾರಿ, ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಸಂತೋಷ ವಾಗ್ಲೆ, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರು, ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ಸ್ಟೀವನ್ ಡಿಸೋಜ, ಊರಿನ ಗಣ್ಯರು ದಾನಿಗಳು ಉಪಸ್ಥಿತರಿದ್ದರು.
ಪ್ರಾಂಶುಪಾಲ ಸೀತಾರಾಮ್ ಸ್ವಾಗತಿಸಿದರು ಉಪನ್ಯಾಸಕ ರತ್ನಾಕರ ಪೂಜಾರಿ ಧನ್ಯವಾದಗಳನ್ನು ಅರ್ಪಿಸಿದರು.
ಸಭಾ ಕಾರ್ಯಕ್ರಮವನ್ನು ಉಪನ್ಯಾಸಕರಾದ ಪ್ರಮೋದ್ ಮತ್ತು ನರಸಿಂಹವರ್ಧನ್ ನಿರೂಪಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಫ್ರೆಡ್ರಿಕ್ ರೆಬೆಲ್ಲೊ ಇಡೀ ಕ್ರೀಡಾಕೂಟವನ್ನು ನಿರ್ದೇಶಿಸಿದರು
ಬಾಲಕರ ವಿಭಾಗದಲ್ಲಿ ಭುವನೇಂದ್ರ ಪದವಿಪೂರ್ವ ಕಾಲೇಜು ಕಾರ್ಕಳ ಇವರು ಪ್ರಥಮ ಸ್ಥಾನ ಹಾಗೂ ಕೆಎಂಇಎಸ್ ಪದವಿಪೂರ್ವ ಕಾಲೇಜು ಕಾರ್ಕಳ ದ್ವಿತೀಯ ಸ್ಥಾನಮಾನ ಗಳಿಸಿದೆ.
ಬಾಲಕಿಯರ ವಿಭಾಗದಲ್ಲಿ ಕೆಎಂಇಎಸ್ ಪದವಿ ಪೂರ್ವ ಕಾಲೇಜು ಪ್ರಥಮ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಬೈಲೂರು ಇವರು ದ್ವಿತೀಯ ಸ್ಥಾನವನ್ನು ಅಲಂಕರಿಸಿದರು.





















