ಶಿವಮೊಗ್ಗ ಮತ್ತು ಉತ್ತರ ಕನ್ನಡ ಜಿಲ್ಲಾ ಜಿಎಸ್‌ಬಿ ವಿದ್ಯಾರ್ಥಿವೇತನ ವಿತರಣೆ ಮತ್ತು ಪ್ರತಿಭಾ ಪುರಸ್ಕಾರ

Picture of RB NEWS

RB NEWS

Bureau Report

ನವೆಂಬರ್ 10 : ಶಿವಮೊಗ್ಗ ಮತ್ತು ಉತ್ತರ ಕನ್ನಡ ಜಿಲ್ಲಾ ಜಿಎಸ್‌ಬಿ ವಿದ್ಯಾರ್ಥಿವೇತನ ವಿತರಣೆ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮಕ್ಕೆ ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶರಾದ ಶ್ರೀಮದ್ ವಿದ್ಯಾಧೀಶ ತೀರ್ಥ ಶ್ರೀಪಾದ ಒಡೆಯರ್ ಸ್ವಾಮೀಜಿ ಉಪಸ್ಥಿತಿ ಮತ್ತು ಆಶೀರ್ವಚನ

ಜಿ.ಎಸ್.ಬಿ. ಸಮಾಜ ಹಿತರಕ್ಷಣಾ ವೇದಿಕೆ (ರಿ.),ಉಡುಪಿ ಜಿಲ್ಲೆ.ಪರಿಕಲ್ಪನೆ ಮತ್ತು ಸಂಯೋಜನೆ ಹಾಗೂ ನೇತೃತ್ವದಲ್ಲಿ ಜಿಎಸ್‌ಬಿ ಸಮಾಜ ಬಾಂಧವರು ಶಿವಮೊಗ್ಗ ಜಿಲ್ಲೆ ಮತ್ತು ಉತ್ತರ ಕನ್ನಡ ಜಿಲ್ಲೆ ಇವರ ಸಹಭಾಗಿತ್ವದಲ್ಲಿ ವಿದ್ಯಾ ಪೋಷಕ ನಿಧಿ ವಿದ್ಯಾರ್ಥಿವೇತನ ವಿತರಣೆ ಮತ್ತು ಜಿಎಸ್‌ಬಿ*ಪ್ರತಿಭಾ ಪುರಸ್ಕಾರ -2024_25 ಕಾರ್ಯಕ್ರಮವು ಶಿವಮೊಗ್ಗದ ಬಂಟರ ಭವನ ಸಭಾಭವನದಲ್ಲಿ ನವೆಂಬರ್ 10, ಆದಿತ್ಯವಾರ, 2024ರಂದು ಜರುಗಲಿರುವುದು.

ಶಿವಮೊಗ್ಗ ಜಿಲ್ಲೆ ಮತ್ತು ಉತ್ತರ ಕನ್ನಡ ಜಿಲ್ಲೆಯ
ಜಿಎಸ್‌ಬಿ ಸಮಾಜದ ಶೈಕ್ಷಣಿಕ ಸಾಧನೆಗೈದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾ ಪೋಷಕ ನಿಧಿ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭದಲ್ಲಿ ಪ್ರತಿಭಾ ಪುರಸ್ಕಾರ ಮಾಡಲಾಗುವುದು.

ಈ ಕಾರ್ಯಕ್ರಮಕ್ಕೆ ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶರಾದ ಶ್ರೀಮದ್ ವಿದ್ಯಾಧೀಶತೀರ್ಥ ಶ್ರೀಪಾದ ಒಡೆಯರ್ ಸ್ವಾಮೀಜಿಯವರ ದಿವ್ಯ ಉಪಸ್ಥಿತಿ ಇರಲಿದ್ದು ಅಪರಾಹ್ನ 2:00 ಗಂಟೆಯಿಂದ ವಿದ್ಯಾರ್ಥಿಗಳಿಗೆ ಹಾಗೂ ಸಮಾಜ ಬಾಂಧವರಿಗೆ ಪ್ರೇರಣದಾಯಿ ಮಾತುಗಳಿಂದ ಆಶೀರ್ವಚನ ನೀಡಲಿದ್ದು, ವಿದ್ಯಾರ್ಥಿ ವೇತನ ವಿತರಣೆ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮಗಳನ್ನು ಅನುಗ್ರಹಿಸಲಿರುವರು.

ಪ್ರತಿಭಾ ಪುರಸ್ಕಾರ:
ಶಿವಮೊಗ್ಗ ಮತ್ತು ಉತ್ತರ ಕನ್ನಡ ಜಿಲ್ಲೆಯ ಜಿಎಸ್‌ಬಿ ವಿದ್ಯಾರ್ಥಿಗಳು ಕಳೆದ ಸಾಲಿನಲ್ಲಿ

  1. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625 ಅಂಕಗಳಲ್ಲಿ 605* *ಮತ್ತು ಅದಕ್ಕಿಂತ ಹೆಚ್ಚು ಅಂಕ ಗಳಿಸಿದವರಿಗೆ .
  2. ಕಳೆದ ಸಾಲಿನಲ್ಲಿ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳಿಗೆ 575 ಮತ್ತು ಅದಕ್ಕಿಂತ ಹೆಚ್ಚು ಅಂಕ ಗಳಿಸಿದವರಿಗೆ
  3. CET,NEET,COMED-K,
    JEE ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ 1000 ದ ಒಳಗೆ ರ್‍ಯಾಂಕ್ ಗಳಿಸಿದವರಿಗೆ, KAS,IAS,IPS,IRS ಮೊದಲಾದ ಉನ್ನತ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತೀರ್ಣರಾದವರಿಗೆ.
  4. ಕಳೆದ ಸಾಲಿನಲ್ಲಿ ಯಾವುದೇ ಪದವಿ ,ಇಂಜಿನಿಯರಿಂಗ್, ವೈದ್ಯಕೀಯ,ಫಾರ್ಮಸಿ ಕಾನೂನು, ಸ್ನಾತಕೋತ್ತರ ಪದವಿಯಲ್ಲಿ Rank ಗಳಿಸಿದವರಿಗೆ.

5 . ಯಾವುದೇ ವಿಷಯದಲ್ಲಿ ಪಿ.ಎಚ್. ಡಿ. ಪದವಿ ಪಡೆದವರಿಗೆ.

  1. ಸಿಎ ಪರೀಕ್ಷೆ ಉತ್ತೀರ್ಣರಾದವರಿಗೆ.
  2. ರಾಷ್ಟ್ರಮಟ್ಟದಲ್ಲಿ ಕ್ರೀಡೆ, ಸಾಂಸ್ಕೃತಿಕ ಇನ್ನಿತರ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆಗೈದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಲಿರುವುದು
    ವಿದ್ಯಾ ಪೋಷಕ ನಿಧಿ ವಿದ್ಯಾರ್ಥಿವೇತನ ಮತ್ತು ಸಂಪೂರ್ಣ ಶೈಕ್ಷಣಿಕ ದತ್ತು ಸ್ವೀಕಾರ ಯೋಜನೆ

ಆರ್ಥಿಕವಾಗಿ ಹಿಂದುಳಿದಿರುವ ಶಿವಮೊಗ್ಗ ಮತ್ತು ಉತ್ತರ ಕನ್ನಡ ಜಿಲ್ಲೆಯ ಜಿಎಸ್‌ಬಿ ಸಮಾಜದ ಹತ್ತನೇ ತರಗತಿ ಮತ್ತು ಮೇಲ್ಪಟ್ಟು ವಿದ್ಯಾಭ್ಯಾಸ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾ ಪೋಷಕ ನಿಧಿ ವಿದ್ಯಾರ್ಥಿ ವೇತನ ಹಾಗೂ ಹೆತ್ತವರನ್ನು ಕಳೆದುಕೊಂಡಿರುವ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ದತ್ತು ಸ್ವೀಕಾರ ಯೋಜನೆಯಡಿಯಲ್ಲಿ ಸಂಪೂರ್ಣ ಶೈಕ್ಷಣಿಕ ಶುಲ್ಕವನ್ನು ಭರಿಸುವ ವಿದ್ಯಾರ್ಥಿ ವೇತನವನ್ನು ವಿತರಿಸಲಾಗುವುದು.

ಶೈಕ್ಷಣಿಕ ಪ್ರೇರಣ ಕಾರ್ಯಾಗಾರ :
ಉಡುಪಿಯ ಕಟಪಾಡಿಯಲ್ಲಿರುವ ತ್ರಿಶಾ ಶೈಕ್ಷಣಿಕ ಸಮೂಹ ಸಂಸ್ಥೆಗಳ ಸಂಸ್ಥಾಪಕ ಸಿಎ ಗೋಪಾಲಕೃಷ್ಣ ಭಟ್ ನೇತೃತ್ವದಲ್ಲಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರೇರಣ ಕಾರ್ಯಾಗಾರವನ್ನು ಏರ್ಪಡಿಸಲಾಗಿದೆ ಎಂದು
ಜಿ ಎಸ್ ಬಿ ಸಮಾಜ ಹಿತರಕ್ಷಣಾ ವೇದಿಕೆಯ ಸಂಚಾಲಕ ಆರ್.ವಿವೇಕಾನಂದ ಶೆಣೈ, ಅಧ್ಯಕ್ಷ ಜಿ. ಸತೀಶ ಹೆಗಡೆ ,ಕೋಟ,ಪ್ರಧಾನ ಕಾರ್ಯದರ್ಶಿ ಸಾಣೂರು ನರಸಿಂಹ ಕಾಮತ್ ಮತ್ತು ಕಾರ್ಯಕ್ರಮದ ಸಂಯೋಜಕರಾದ ಶಿವಮೊಗ್ಗ ಮಣೂರು ಪ್ರಕಾಶ್ ಪ್ರಭು, ರಾಜೇಂದ್ರ ಪೈ, ಸಾಗರ ಹಾಗೂ ಶಿವಮೊಗ್ಗ ಜಿಎಸ್‌ಬಿ ಸಮಾಜದ ಅಧ್ಯಕ್ಷ ಭಾಸ್ಕರ್ ಜಿ ಕಾಮತ್ ರವರು ತಿಳಿಸಿರುತ್ತಾರೆ.‌

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top