ಶ್ರೀ ಭುವನೇಂದ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ರಾಜ್ಯಮಟ್ಟಕ್ಕೆ ಆಯ್ಕೆ
ಕಾರ್ಕಳ : ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಮತ್ತು ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಡಿ. 9ರಂದು ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ನಡೆದ 2024-25ನೇ ಸಾಲಿನ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಮೈಸೂರು ವಿಭಾಗ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಕಾರ್ಕಳದ ಶ್ರೀ ಭುವನೇಂದ್ರ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಪ್ರಾರ್ಥನಾ ಪೈ ಇಂಗ್ಲಿಷ್ ಚರ್ಚಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಸುರಕ್ಷಾ,ಕನ್ನಡ ಚರ್ಚಾ ಸ್ಪರ್ಧೆಯಲ್ಲಿ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ.
ಇವರ ಅಭೂತಪೂರ್ವ ಸಾಧನೆಯನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಅಧ್ಯಾಪಕ, ಅಧ್ಯಾಪಕೇತರ ವೃಂದದವರು ಅಭಿನಂದಿಸಿ ಶುಭ ಹಾರೈಸಿದ್ದಾರೆ.





















