[t4b-ticker]

ಅಯೋಧ್ಯೆ: ರಾಮನ ದರ್ಶನ ಪಡೆದು ದೇವರ ಪಾದ ಸೇರಿದ ಪಾಂಡುರಂಗ ಶಾನುಭಾಗ್!

Picture of RB NEWS

RB NEWS

Bureau Report

ಉಡುಪಿ: ಸಂಘದ ಹಿರಿಯ ಸಕ್ರಿಯ ಕಾರ್ಯಕರ್ತ ಪಾಂಡುರಂಗ ಶಾನುಭಾಗ ಅವರು ಅಯೋಧ್ಯೆ ಶ್ರೀ ರಾಮ ಮಂದಿರಕ್ಕೆ ಭೇಟಿ ನೀಡಿ ದೇವರ ದರುಶನ ಪಡೆದು ಹಿಂತಿರುಗುತ್ತಿದ್ದ ಸಂದರ್ಭದಲ್ಲಿ ಹೃದಯಾಘಾತಕ್ಕೊಳ ವಿಧಿವಶರಾಗಿದ್ದಾರೆ.

ಭಾನುವಾರ ಮಧ್ಯಾಹ್ನ ಶ್ರೀ ರಾಮಮಂದಿರದ ಸಮೀಪದಲ್ಲಿ ಪಾಂಡುರಂಗ ಶಾನುಭಾಗ ಅವರು ವಿಧಿವಶರಾದರು.

ಅಂದು ಬೆಳಿಗ್ಗೆ ರಾಮನ ದರ್ಶನ‌ ಪಡೆದು ಅತ್ಯಂತ ಧನ್ಯತೆಯನ್ನು ವ್ಯಕ್ತಪಡಿಸಿ ಪೇಜಾವರ ಶ್ರೀಗಳಿಂದ ಕಲಶಾಭಿಷೇಕದ ತೀರ್ಥ ಪ್ರಸಾದ ಸ್ವೀಕರಿಸಿ ಹರ್ಷಚಿತ್ತದೊಂದಿಗೆ ಹಿಂತಿರುಗಿದ್ದರು.

ಅಪರಾಹ್ನದ ಪಲ್ಲಕ್ಕಿಉತ್ಸವಕ್ಕೆ ಆಗಮಿಸುವಾಗ ಮಂದಿರದ ಹೊರಭಾಗದ ಗೇಟ್ ಬಳಿಯಲ್ಲಿ ಅವರಿಗೆ ಎದೆನೋವು ಕಾಣಿಸಿಕೊಂಡಿತು.

ಸಮೀಪವರ್ತಿಗಳು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಅವರ ಪ್ರಾಣಪಕ್ಷಿ ಹಾರಿಹೋಗಿತ್ತು.

ಪಾಂಡುರಂಗ ಶಾನುಭಾಗ ಅವರು
ಜೀವನ ಪರ್ಯಂತ ಹಿಂದು ಸಿದ್ಧಾಂತಕ್ಕಾಗಿ ದೈಹಿಕ ಅಂಧತ್ವವಿದ್ದರೂ , ಸಂಘದಲ್ಲಿ ಅತ್ಯಂತ ಸಕ್ರಿಯರಾಗಿದ್ದರು. ಅಪೂರ್ವ ಚಿಂತಕರೂ ರಾಷ್ಟ್ರ ಭಕ್ತರೆಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದರು.

ಪೇಜಾವರ ಶ್ರೀಗಳು ಸಂತಾಪ…

ಶಾನಾಭಾಗರಿಗೆ ಸಂತೋಷದಿಂದ ತೀರ್ಥಪ್ರಸಾದ ನೀಡಿ , ಸಂಸ್ಕೃತ ದಲ್ಲೇ ಸಂಭಾಷಣೆ ನಡೆಸಿ ಕುಶಲೋಪರಿ ನಡೆಸಿದ್ದ ಪೇಜಾವರ ಶ್ರೀಗಳು ಈ ಸುದ್ದಿ ತಿಳಿದು ಆಘಾತ ವ್ಯಕ್ತಪಡಿಸಿದ್ದಾರೆ. ಅವರ ಆತ್ಮಕ್ಕೆ ರಾಮನು ಸದ್ಗತಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸಿದ್ದಾರೆ . ವಿ ಹಿಂಪ ಮುಖಂಡ ಗೋಪಾಲ್ ,
ಮಾಜಿ ಶಾಸಕ ರಘುಪತಿ ಭಟ್ ಸ್ಥಳದಲ್ಲಿದ್ದು ಪಾಂಡುಗಂಗ ಶಾನುಭಾಗ ಅವರ ಪಾರ್ಥಿವ ಶರೀರ ಊರಿಗೆ ತರುವಲ್ಲಿ ಎಲ್ಲ ಪ್ರಯತ್ನ ನಡೆಸಿದ್ದಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top