ಜ.26ರಿಂದ 30ರ ತನಕ ಅತ್ತೂರು ಸಂತಲಾರೆನ್ಸ್ ಬಸಿಲಿಕಾ ವಾರ್ಷಿಕೋತ್ಸವ

Picture of RB NEWS

RB NEWS

Bureau Report

ಕಾರ್ಕಳ: ಅತ್ತೂರು ಸಂತ ಲೋರೆನ್ಸ್ ಬಸಿಲಿಕದ ವಾರ್ಷಿಕ ಮಹೋತ್ಸವ 2025 ಜನವರಿ 26ರಿಂದ ಮೊದಲ್ಗೊಂಡು ಜ.30ರಂದು ಸಂಪನ್ನಗೊಳ್ಳಲಿದೆ. ಈ ಬಗ್ಗೆ ಎಲ್ಲಾ ಪೂರ್ವಭಾವಿ ಸಿದ್ದತೆಗಳು ನಡೆದಿದೆ. ಬಸಿಲಿಕದ ವತಿಯಿಂದ ವಾರ್ಷಿಕ ಮಹೋತ್ಸವದ ಆಚರಣೆಗೆ ಸರ್ವ ರೀತಿಯಲ್ಲಿ ಸನ್ನದ್ಧರಾಗಿದ್ದೇವೆ. ಶ್ರೀ ಕ್ಷೇತ್ರಕ್ಕೆ ಆಗಮಿಸುತ್ತಿರುವ ಯಾತ್ರಿಕರ ಭೇಟಿಯು, ಆಧ್ಯಾತ್ಮಿಕ ನೆಮ್ಮದಿ, ಮಾನಸಿಕ ಸಂತೃಪ್ತಿ ಹಾಗೂ ಸ್ಮರಣೀಯವಾಗಲೆಂದು ಹಾರೈಸುತ್ತೇವೆ ಎಂದು ಬಸಿಲಿಕದ ರೆಕ್ಟರ್/ನಿರ್ದೇಶಕರಾದ ಅತೀ ವಂದನೀಯ ಫಾ. ಆಲ್ಬನ್ ಡಿ’ಸೋಜಾ ಹೇಳಿದರು.


ಅತ್ತೂರು ಸಂತ ಲಾರೆನ್ಸ್ ಬಸಿಲಿಕ ಕಚೇರಿಯಲ್ಲಿ ಆಯೋಜಿಸಿದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು,ಜ. 26ರಂದು ಮಕ್ಕಳಿಗಾಗಿ ಪೂಜೆ ಹಾಗೂ ವಿಶೇಷ ಪ್ರಾರ್ಥನೆ ಏರ್ಪಡಿಸಲಾಗಿದೆ.
ಜ. 27ರಂದು ಅಸ್ವಸ್ಥರಿಗಾಗಿ ಮೂರು ವಿಶೇಷ ಪೂಜೆ ಇರುವುದು. ಅಸ್ವಸ್ಥರು ಅದೇ ದಿವಸದ ಪೂಜೆಗೆ ಬಂದು ನಮ್ಮೊಂದಿಗೆ ಸಹಕರಿಸಬೇಕಾಗಿ ವಿನಂತಿಸಿದರು.


ವಾರ್ಷಿಕ ಮಹೋತ್ಸವದ ದಿನಗಳಲ್ಲಿ ಕೊಂಕಣಿ ಭಾಷೆಯಲ್ಲಿ 31 ಹಾಗೂ ಕನ್ನಡ ಭಾಷೆಯಲ್ಲಿ 7 ಹೀಗೆ ಒಟ್ಟು 38 ದಿವ್ಯ ಪೂಜೆಗಳನ್ನು ಅರ್ಪಿಸಲಾಗುವುದು. ವಾರ್ಷಿಕ ಮಹೋತ್ಸವದ ದಿನಗಳಲ್ಲಿ, ಬೆಳ್ತಂಗಡಿ, ಬಾರುಯಿಪುರ್, ಮಂಗಳೂರು ಮತ್ತು ಉಡುಪಿ ಧರ್ಮಕ್ಷೇತ್ರದ ಧರ್ಮಾಧ್ಯಕ್ಷರು ಹಾಗೂ ಶ್ರೇಷ್ಠ ಗುರುಗಳು ಇಲ್ಲಿಗೆ ಆಗಮಿಸಿ ದಿವ್ಯ ಪೂಜೆಯನ್ನು ಅರ್ಪಿಸುವರು ಎಂಬ ಮಾಹಿತಿಯನ್ನು ಇದೇ ಸಂದರ್ಭದಲ್ಲಿ ನೀಡಿದರು.


ಭಕ್ತಾದಿಗಳ ಗಮನಕ್ಕೆ
ಬಸಿಲಿಕಾದ ಬಲ ಬದಿಯಲ್ಲಿ ‘ಪವಾಡ ಮೂರ್ತಿ’ ಪ್ರತಿಷ್ಠಾಪಿಸಿದ ಪಕ್ಕದಲ್ಲಿ ಕಥೋಲಿಕ್ ಕ್ರೈಸ್ತರಿಗೆ ಪಾಪನಿವೇದನೆಗೆ ವ್ಯವಸ್ಥೆ ಮಾಡಲಾಗಿದೆ. ದೇವಾಲಯದ ಒಳಗೆ ಪ್ರಾರ್ಥನೆಗಾಗಿ ಮಾತ್ರ ಅವಕಾಶ ನೀಡಲಾಗಿದೆ.
ಭಕ್ತರು ಶ್ರೀಕ್ಷೇತ್ರಕ್ಕೆ ಹೇಳಿಕೊಂಡ ಹಣದ ರೂಪದ ಹರಕೆ, ವಸ್ತು ರೂಪದ ಹರಕೆ, ಮೊಂಬತ್ತಿಗಳ ಹರಕೆಗಳನ್ನು ದೇವಾಲಯದ ಎಡಬದಿಯಲ್ಲ್ಲಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಭಕ್ತಾಧಿಗಳಿಗೆ ಕುಡಿಯಲು ಶುದ್ಧ ಹಾಗೂ ತಂಪು ನೀರಿನ ವ್ಯವಸ್ಥೆಯನ್ನು ಬಸಿಲಿಕದ ವಠಾರದಲ್ಲಿ 5 ಸ್ಥಳದಲ್ಲಿ ಮಾಡಲಾಗುವುದು.
ಶಾರೀರಿಕ ಅಗತ್ಯತೆ ಪೂರೈಸಲು ಬಸಿಲಿಕದ ವಠಾರದಲ್ಲಿ ಪೋಲಿಸ್ ಸೇವಾ ಕೇಂದ್ರದ ಪಕ್ಕದಲ್ಲಿ ಸುಮಾರು 40 ಆಧುನಿಕ ಸವಲತ್ತುಗಳುಳ್ಳ ಶೌಚಾಲಯಗಳು, ಗುರುನಿವಾಸದ ಎಡ ಬದಿಯಲ್ಲಿ 20 ಶೌಚಾಲಯಗಳು ಇವೆ. ವಿಕಲಚೇತನರಿಗಾಗಿ ಪ್ರತ್ಯೇಕ ಹಾಗೂ ಹಿರಿಯ ನಾಗರಿಕರಿಗಾಗಿ ಕೊಮೊಡ್ ಮಾದರಿಯ ಶೌಚಾಲಯ ವ್ಯವಸ್ಥೆ ಕಲ್ಪಿಸಲಾಗಿದೆ.
ಕಾನೂನು ಮತ್ತು ಶಿಸ್ತು ಪಾಲನೆಗಾಗಿ ಗರಿಷ್ಟ ಸಂಖ್ಯೆಯ ಪೋಲಿಸ್ ಅಧಿಕಾರಿ ಹಾಗೂ ಪೋಲಿಸ್ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸಲಿದ್ದಾರೆ. ಯಾತ್ರಾರ್ಥಿಗಳ ಸುರಕ್ಷತೆಗೆ ಸಹಕರಿಸುತ್ತಾರೆ.


ಕಾಬೆಟ್ಟು ದ್ವಾರದ ಮೂಲಕ ಬರುವ ವಾಹನಗಳ ದಟ್ಟಣೆಯಿಂದ ಭಕ್ತಾಧಿಗಳಿಗೆ ಆಗುವ ಅಡಚಣೆಯನ್ನು ನಿವಾರಿಸಲು, ಪುಲ್ಕೇರಿಯಿಂದ ದೂಪದಕಟ್ಟೆ ಮೂಲಕ ವಾಹನಗಳನ್ನು ಕಳುಹಿಸಿ ದೂಪದಕಟ್ಟೆ ದ್ವಾರ ಪ್ರವೇಶಿಸುವಾಗ ಎಡಬದಿಗೆ ವಿಸ್ತಾರವಾದ ವಾಹನ ನಿಲುಗಡೆ ಸ್ಥಳ, ಗಾರ್ಡನ್ ಹೌಸ್ ಹತ್ತಿರ ತಿರುವಿನಲ್ಲಿ ಎಡಬದಿಯಲ್ಲಿ ಹಾಗೂ ಗಾರ್ಡನ್ ಹೌಸ್ ದಾಟಿದ ನಂತರ ಎಡಬದಿಯಲ್ಲಿ ವಾಹನ ನಿಲುಗಡೆಗೆ ಅವಕಾಶ ಕಲ್ಪಿಸಲಾಗಿದೆ. ಅಲ್ಲಿಂದ ಮುಂದೆ ಬ್ಯಾರಿಕೇಡ್ ಹಾಕಿರುವ ತನಕ ಮಾತ್ರ ರಿಕ್ಷಾ ಸಂಚಾರಕ್ಕೆ ಅವಕಾಶವಿದೆ. ಅಲ್ಲಿಂದ ಮುಂದಕ್ಕೆ ವಾಹನಗಳಿಗೆ ಪ್ರವೇಶವಿಲ್ಲ.
ಕಾಬೆಟ್ಟು ಕಡೆಯಿಂದ ಬರುವ ವಾಹನಗಳಿಗೆ ಪ್ರಸಾದ್ ಟೈಲರ್ ಜಂಕ್ಷನ್ ದಾಟಿ ಮುಂದೆ ಬರುವಾಗ ಬಲಬದಿಯಲ್ಲಿ ಸಂತ ಲೋರೆನ್ಸ್ ಧರ್ಮಕೇಂದ್ರದ ಆಡಳಿತಕ್ಕೊಳಪಟ್ಟ ಸಂತ ಲೋರೆನ್ಸ್ ಹೈಸ್ಕೂಲ್ ಶಾಲಾ ಆಟದ ವಿಶಾಲವಾದ ಮೈದಾನವನ್ನು ಸಂಪೂರ್ಣವಾಗಿ ವಾಹನ ನಿಲುಗಡೆಗಾಗಿಯೇ ಕಾದಿರಿಸಲಾಗಿದೆ.


ವೆಹಿಕಲ್ ಪಾಸ್ ಹೊಂದಿದ ವಾಹನ ಚಾಲಕರು ತಮ್ಮ ವಾಹನಗಳನ್ನು ಕಾಬೆಟ್ಟು – ಅತ್ತೂರು ಕಾನ್ವೆಂಟ್ ಮಾರ್ಗವಾಗಿ ತಂದು ಎಡಬದಿಯ ಪಂಚಾಯತ್ ಶೌಚಾಲಯದ ಬಳಿ ಎಡಕ್ಕೆ ತಿರುಗಿ ಮುಂದೆ ಸಾಗಿ ಬಲಬದಿಯ ಬಿಎಸ್‌ಎನ್‌ಎಲ್ ಮೊಬೈಲ್ ಟವರ್ ಬಳಿ ಮುಂದೆ ಸಾಗಿ ಎಡಕ್ಕೆ ತಿರುಗಿ ವಿಐಪಿ ಹಾಗೂ ಇತರ ಗುರುತು ಚೀಟಿದಾರರಿಗಾಗಿ ನಿರ್ಮಿಸಿದ ವಿಶಾಲವಾದ ಪಾರ್ಕಿಂಗ್ ವಠಾರದಲ್ಲಿ ವಾಹನಗಳನ್ನು ನಿಲ್ಲಿಸುವುದು.


ವೆಹಿಕಲ್ ಪಾಸ್ ಹೊಂದಿದ ವಾಹನಗಳು, ನಿಲುಗಡೆ ಮಾಡಿದ ವಾಹನಗಳಿಗೆ ನಿಲುಗಡೆ ಸ್ಥಳದಿಂದ ಮುಂದೆ ಸಾಗಿ ಏಕಮುಖ ಕಾಂಕ್ರಿಟ್ ರಸ್ತೆಯ ಮೂಲಕ ಕಾರ್ಕಳ-ಪಡುಬಿದ್ರಿ ರಸ್ತೆಗೆ ಸಂಪರ್ಕ ಕಲ್ಪಿಸಲಾಗಿದೆ. ಪೋಲಿಸ್ ಸಿಬಂದಿ ವಾಹನಗಳಿಗೆ ಹಾಗೂ ತುರ್ತು ಚಿಕಿತ್ಸಾ ವಾಹನಗಳಿಗೆ ಬಿಟ್ಟರೆ ಬೇರೆ ಯಾವುದೇ ವಾಹನಗಳಿಗೆ ಬಸಿಲಿಕಾದ ವಠಾರಕ್ಕೆ ಪ್ರವೇಶವಿಲ್ಲ.
ಬಸಿಲಿಕದ ವಠಾರದಲ್ಲಿ ಬಸಿಲಿಕದ ಅಧಿಕೃತ ಸ್ಟಾಲ್‌ನಲ್ಲಿ ಮಾತ್ರ ಮೊಂಬತ್ತಿ ಮಾರಾಟ ಮಾಡಲು ಅವಕಾಶ ಮಾಡಲಾಗಿದೆ. ಇತರರಿಗೆ ಬಸಿಲಿಕಾ ವಠಾರದಲ್ಲಿ ಮೊಂಬತ್ತಿ ಮಾರಾಟ ಮಾಡಲು ಸಂಪೂರ್ಣವಾಗಿ ನಿಷೇಧಿಸಲಾಗಿದೆ.


ಸಾರ್ವಜನಿಕರ ಹಾಗೂ ಭಕ್ತಾಧಿಗಳ ಸುಗಮ ಸಂಚಾರಕ್ಕಾಗಿ ದೂಪದಕಟ್ಟೆಯಿಂದ ಪ್ರಸಾದ್ ಟೈಲರ್ ಜಂಕ್ಷನ್‌ವರೆಗೆ ರಸ್ತೆಯ ಎರಡೂ ಕಡೆಯ ಅಂಚಿನಿAದ ಸ್ವಲ್ಪ ಜಾಗ ಬಿಟ್ಟು ಅಂಗಡಿಮುಂಗಟ್ಟು ನಿರ್ಮಿಸುವಂತೆ ಸ್ಥಳೀಯ ನಿಟ್ಟೆ ಗ್ರಾಮ ಪಂಚಾಯತ್ ಆಡಳಿತ ಮಂಡಳಿಗೆ ತಿಳಿಸಲಾಗಿದೆ. ಇದು ಸುರಕ್ಷೆಯ ದೃಷ್ಠಿಯಿಂದ ಹಾಗೂ ರಸ್ತೆಯಲ್ಲಿ ಹಾದುಹೋಗುವ ಯಾವುದೇ ವ್ಯಕ್ತಿಗೆ ದೈಹಿಕ ಕಿರುಕುಳ ಆಗದಂತೆ ತಡೆಯಲು ಅತೀ ಆವಶ್ಯಕವಾಗಿದೆ.
ರೋಮ್ ಹೊರತು ಪಡಿಸಿದರೆ ಅತ್ತೂರು !

ಬಸಿಲಿಕಾ ವಠಾರದಲ್ಲಿ ಹಾಸುಕಲ್ಲು ಮತ್ತು ಇಂಟರ್‌ಲಾಕನ್ನು ಅಳವಡಿಸಿ ಪರಿಸರವನ್ನು ಧೂಳಿನಿಂದ ಮುಕ್ತಗೊಳಿಸಿದ್ದೇವೆ.

        ಸಹಾಯಕ ಗುರು  ರೆ. ಫಾ. ಲ್ಯಾರಿ ಪಿಂಟೊ, ಅಧ್ಯಾತ್ಮಿಕ ಗುರು ರೆ. ಫಾ. ರೋಮನ್ ಮಸ್ಕರೇನಸ್, ಉಪಾಧ್ಯಕ್ಷ ಸಂತೋಷ್ ಡಿ’ಸಿಲ್ವ, ಕಾರ್ಯದರ್ಶಿ:ರೊನಾಲ್ಡ್ ನೊರೊನ್ಹ,ಸದಸ್ಯರಾದ ವಂದೀಶ್ ಮತಾಯಸ್, ವಲೇರಿಯನ್ ಪಾÊಸ್ ಉಪಸ್ಥಿತಿರಿದ್ದರು.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top