ದರೆಗುಡ್ಡೆ, ಕೆಲ್ಲಪುತ್ತಿಗೆ ಯಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ
ವರದಿ : ರಾಯಿ ರಾಜಕುಮಾರ ಮೂಡುಬಿದಿರೆ



ಮೂಡುಬಿದಿರೆ: ದರೆಗುಡ್ಡೆ ಗ್ರಾಮ ಪಂಚಾಯತ್ ನ ನೂತನ ಕಾರ್ಯಾಲಯವನ್ನು ಫೆಬ್ರವರಿ 3ರಂದು ಮೂಲ್ಕಿ- ಮೂಡುಬಿದಿರೆ ಶಾಸಕ ಉಮಾನಾಥ ಕೋಟ್ಯಾನ್ ಉದ್ಘಾಟಿಸಿದರು.
ತರುವಾಯ ದರೆಗುಡ್ಡೆ ಅಂಗನವಾಡಿ ಕೇಂದ್ರ, ಕೆಲ್ಲ ಪುತ್ತಿಗೆ ಕೊರಗರ ಕಾಲೊನಿಯ ಸಮುದಾಯ ಭವನ , ಶಾಲಾ ವಿವೇಕ ಕೊಠಡಿ ಲೋಕಾರ್ಪಣೆಗೈದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್, ಹಿರಿಯ ನಾಯಕ ಜಗದೀಶ್ ಅಧಿಕಾರಿ, ಪಂಚಾಯತ್ ಅಧ್ಯಕ್ಷ ಅಶೋಕ್ ಶೆಟ್ಟಿ, ಉಪಾಧ್ಯಕ್ಷರು, ವಿವಿಧ ಅಧಿಕಾರಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.





















