ಕೊವಿಡ್ ಅಥವಾ ಕೊವಿಡ್ ಲಸಿಕೆ ಅಡ್ಡಪರಿಣಾಮಗಳು:ತಜ್ಞರು ಹಾಗೂ ವಿಜ್ಞಾನಿಗಳನ್ನು ಒಳಗೊಂಡ ಸಮಿತಿ ರಚನೆಗೆ ಮುಖ್ಯಮಂತ್ರಿ ಅದೇಶ

Picture of RB NEWS

RB NEWS

Bureau Report

ನೂರಾರು ಪತ್ರಿಕೆಗಳು, ನೂರಾರು ಚಾನೆಲ್ ಗಳು ಮಾಡಬೇಕಾದ ಕೆಲಸವನ್ನು ಏಕಾಂಗಿಯಾಗಿ ಹಿರಿಯ ಪತ್ರಕರ್ತ ರಾಜಾರಾಂ ತಲ್ಲೂರು ಅವರು ಯಶಸ್ವಿಯಾಗಿ ನಿರ್ವಹಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಈ ಬಗ್ಗೆ ಬರೆದುಕೊಂಡಿದ್ದಾರೆ. ಓದಿ…..

ಕೊವಿಡ್ ಅಥವಾ ಕೊವಿಡ್ ಲಸಿಕೆಯ ಅಡ್ಡಪರಿಣಾಮದಿಂದ ಹಠಾತ್ ಸಾವಿಗೀಡಾದವರ ಬಗ್ಗೆ ಅಧ್ಯಯನ ನಡೆಸಿ, ಮುಂದೆ ಇಂತಹ ಸಾವುಗಳು ಸಂಭವಿಸದಂತೆ ತಡೆಯುವ ಉದ್ದೇಶದಿಂದ ಸಮರ್ಪಕ ಸಂಶೋಧನೆ ನಡೆಸಲು ತಜ್ಞರು ಹಾಗೂ ವಿಜ್ಞಾನಿಗಳನ್ನು ಒಳಗೊಂಡ ಒಂದು ಸಮಿತಿ ರಚನೆಗೆ ನಿರ್ಧರಿಸಲಾಗಿದೆ.

ಕೊರೊನಾ ಕಾಲದ ನಂತರದಿಂದ ಎಳೆಯ ವಯಸಿನವರು, ಯುವಜನರು ಸೇರಿದಂತೆ ಬದುಕಿ ಬಾಳಬೇಕಾದವರು ಇದ್ದಕ್ಕಿದ್ದಂತೆ ಇಲ್ಲವಾಗುತ್ತಿದ್ದಾರೆ, ಇವರನ್ನು ನಂಬಿದ ಕುಟುಂಬಗಳು ಬೀದಿಪಾಲಾಗುತ್ತಿವೆ. ಇದೊಂದು ಗಂಭೀರ ಸಮಸ್ಯೆ, ಆದಷ್ಟು ಶೀಘ್ರ ಈ ಸಮಸ್ಯೆಯ ಮೂಲ ಪತ್ತೆಮಾಡಿ, ಪರಿಹರಿಸಬೇಕು ಎನ್ನುವುದು ನನ್ನ ಯೋಚನೆಯೂ ಆಗಿತ್ತು.

ಇಂತಹ ಸಂದರ್ಭದಲ್ಲಿ ಈ ಸಮಸ್ಯೆಯ ಬಗ್ಗೆ ಗಮನ ಸೆಳೆದು ಹಿರಿಯ ಪತ್ರಕರ್ತರಾದ ರಾಜಾರಾಂ ತಲ್ಲೂರು ಅವರು ಬರೆದ ಪತ್ರ ನನ್ನ ಯೋಚನೆಯನ್ನು ಕಾರ್ಯರೂಪಕ್ಕೆ ತರಲು ಪ್ರೇರಣೆಯಾಯಿತು. ಅವರಿಗೆ ಕೃತಜ್ಞತೆಗಳು.

ತಜ್ಞರು ಹಾಗೂ ವಿಜ್ಞಾನಿಗಳ ಸಮಿತಿ ನೀಡುವ ವರದಿಯನ್ನು ಆಧರಿಸಿ ಕ್ರಮಗಳನ್ನು ಕೈಗೊಳ್ಳಲು ನಮ್ಮ ಸರ್ಕಾರ ಬದ್ಧವಾಗಿದೆ.

  • ಸಿದ್ದರಾಮಯ್ಯ

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top