ಕಾರ್ಕಳ ವಿಧಾನಸಭಾ ಕ್ಷೇತ್ರದ ವಿವಿಧ ಕಿಂಡಿ ಅಣೆಕಟ್ಟು ನಿರ್ಮಾಣ ಕಾಮಗಾರಿಗಳಿಗೆ ರಾಜ್ಯ ಸರಕಾರದಿಂದ ರೂ. 02.80 ಕೋಟಿ ಅನುದಾನ ಮಂಜೂರು : ವಿ ಸುನಿಲ್ ಕುಮಾರ್

Picture of RB NEWS

RB NEWS

Bureau Report

ಕಾರ್ಕಳ ವಿಧಾನಸಭಾ ಕ್ಷೇತ್ರದ ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ಸಾಂತಕ್ಯಾರು ಮೂಲ್ದೂಟ್ಟು ಎಂಬಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ 02.00 ಕೋಟಿ ಅನುದಾನ, ಮಾಳ ಗ್ರಾಮದ ಅಚ್ಚು ಪೂಜಾರಿ ಮನೆ ಬಳಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ. 30.00 ಲಕ್ಷ ಅನುದಾನ, ಹಾಗೂ ನಿಟ್ಟೆ ಗ್ರಾಮದ ಬೆರಂದೊಟ್ಟು ಗರಡಿ ಬಳಿಯ ತೊಯ್ಪಲಕಟ್ಟೆ ಎಂಬಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ. 50.00 ಲಕ್ಷ ಅನುದಾನ ಸೇರಿದಂತೆ ಒಟ್ಟು 02.80 ಕೋಟಿ ರೂಪಾಯಿ ಮೊತ್ತದ ಕಾಮಗಾರಿಗಳಿಗೆ ಸರಕಾರದ ಅನುಮೋದನೆ ದೊರೆತಿರುತ್ತದೆ.

ಶಾಸಕರ ವಿಶೇಷ ಮುತುವರ್ಜಿ ಹಾಗೂ ನಿರಂತರ ಪ್ರಯತ್ನದಿಂದಾಗಿ ಸರಕಾರದಿಂದ ಅನುದಾನ ಮಂಜೂರಾಗಿದ್ದು, ಆದಷ್ಟೂ ಶೀಘ್ರವಾಗಿ ಕಾಮಗಾರಿಗಳನ್ನು ಪ್ರಾರಂಭಿಸಿಲಾಗುವುದು ಎಂದು ಕಾರ್ಕಳ ಶಾಸಕರ ʻವಿಕಾಸʼ ಜನಸೇವಾ ಕಛೇರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top