ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನ

Picture of RB NEWS

RB NEWS

Bureau Report

ನವದೆಹಲಿ: ಮದ್ಯ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ.

ಕೇಜ್ರಿವಾಲ್ ಅವರಿಗೆ ಬಂಧನದಿಂದ ರಕ್ಷಣೆ ನೀಡಲು ದೆಹಲಿ ಹೈಕೋರ್ಟ್ ನಿರಾಕರಿಸಿತ್ತು. ಇದರ ಬೆನ್ನಲ್ಲೇ ಇ.ಡಿ ಅಧಿಕಾರಿಗಳ ತಂಡ ಕೇಜ್ರಿವಾಲ್‌ ಅವರ ನಿವಾಸಕ್ಕೆ ತೆರಳಿ ಶೋಧ ಕಾರ್ಯ ನಡೆಸಿದವು.

ಸರ್ಚ್ ವಾರಂಟ್‌ನೊಂದಿಗೆ  12 ಅಧಿಕಾರಿಗಳ ತಂಡ ತೆರಳಿ ದೆಹಲಿ ಸಿಎಂ ಕೇಜ್ರಿವಾಲ್‌ ನಿವಾಸದಲ್ಲಿ ಪರಿಶೀಲನೆ ನಡೆಸಿದ್ದವು. ಈ ವೇಳೆ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದ ಅಧಿಕಾರಿಗಳು, ಬಳಿಕ ಕೇಜ್ರಿವಾಲ್‌ ಅವರನ್ನು ಬಂಧಿಸಿದ್ದಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top