ಧ್ವನಿವರ್ಧಕಗಳ ಮೇಲಿನ ನಿಯಂತ್ರಣದಿಂದ ಕಲಾವಿದರ ಬದುಕಿಗೆ ಹೊಡೆತ ಬೀಳಲಿದೆ – ನಿರ್ದೇಶಕ ಜೀವನ್ ರಾಮ್ ಸುಳ್ಯ

Picture of RB NEWS

RB NEWS

Bureau Report

ಮೂಡುಬಿದಿರೆ: ಸಭೆ ಸಮಾರಂಭ.ಮೆರವಣಿಗೆ, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಡಿ.ಜೆ ಗೆ ನಿರ್ಬಂಧ ಹೇರಿದನ್ನು ಸ್ವಾಗತಿಸುತ್ತೇನೆ. ಆದರೆ ಧ್ವನಿವರ್ಧಕ ಬಳಕೆಗೆ ಸರಕಾರ ನಿಯಂತ್ರಣ ಹೇರಿದರಿಂದ ಇದನ್ನೆ ನಂಬಿ ಬದುಕು ಕಟ್ಟಿಕೊಂಡಿರುವ ಕಲಾವಿದರು ಅತಂತ್ರಕ್ಕೊಳಗಾಗಿದ್ದಾರೆ.

ಈ ವಿಚಾರದಲ್ಲಿ ಆರೋಗ್ಯಕರ ಸಾಂಸ್ಕೃತಿಕ ನೀತಿಯನ್ನು ಸರಕಾರ ಜಾರಿಗೆ ತರಬೇಕು ಎಂದು ರಂಗ ನಿರ್ದೇಶಕ ಜೀವನ್ ರಾಮ್ ಸುಳ್ಯ ಹೇಳಿದರು.

ಸಮಾಜ ಮಂದಿರದಲ್ಲಿ ನಡೆಯುತ್ತಿರುವ ಮೂಡುಬಿದಿರೆಯ 62ನೇ ಸಾರ್ವಜನಿಕ ಗಣೇಶೋತ್ಸವ ಪ್ರಯುಕ್ತ ಬುಧವಾರ ಸಂಜೆ ಸಾಂಸ್ಕೃತಿ‌ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಎಲ್ಲರು ಭಕ್ತಿಯಿಂದ ಆರಾಧಿಸಿಕೊಂಡು ಬರುತ್ತಿರುವ ವಿಘ್ನ ನಿವಾರಕ ಗಣಪನನ್ನು ಇಲ್ಲಿನ ಸಮಾಜ ಮಂದಿರದಲ್ಲಿ ಸಾರ್ವಜನಿಕ ನೆಲೆಯಲ್ಲಿ ಸಂಭ್ರನದಿಂದ ಆಚರಿಸಿಕೊಂಡು ಬರಲಾಗುತ್ತಿದ್ದು ಇದೇ ರೀತಿ ಮುಂದುವರಿಯಲಿ ಹಾರೈಸಿದರು.

ಅಧ್ಯಕ್ಷತೆ ವಹಿಸಿದ ಮೂಡುಬಿದಿರೆ ಗಣೇಶೋತ್ಸವ ಟ್ರಸ್ಟ್ ನ ಅಧ್ಯಕ್ಷ ನಾರಾಯಣ ಪಿ.ಎಂ ಭಕ್ತರ ಸಹಕಾರದಿಂದ ಇಲ್ಲಿನ ಗಣೇಶೋತ್ಸವ ಮೂಡುಬಿದಿರೆಯ ಉತ್ಸವದಂತೆ ಆಚರಿಸಲಾಗುತ್ತಿದೆ. ಪುರಸಭೆ ವತಿಯಿಂದ ಸ್ವರಾಜ್ಯ ಮೈದಾನದಿಂದ ಅಲಂಗಾರಿನವರೆಗೆ ರಸ್ತೆಯ ಎರಡು ಬದಿಯನ್ನು ವಿದ್ಯುದ್ದೀಪಗಳಿಂದ ಅಲಂಕಾರಗೊಳಿಸಲಾಗಿದೆ ಎಂದರು.

ಪುರಸಭೆ ಮುಖ್ಯಾಧಿಕಾರಿ ಇಂದು ಎಂ., ಇಂತಹ ಕಾರ್ಯಕ್ರಮಗಳಲ್ಲಿ ಮಕ್ಕಳನ್ನು ಹೆಚ್ಚು ತೊಡಗಿಸಿಕೊಳ್ಳಬೇಕು ಎಂದರು. ಮೂಡ ಅಧ್ಯಕ್ಷ ಹರ್ಷವರ್ಧನ ಪಡಿವಾಳ್, ಪೊಲೀಸ್ ಇನ್ ಸ್ಪೆಕ್ಟರ್ ಸಂದೇಶ್ ಪಿ.ಜಿ, ಟ್ರಸ್ಟ್ ನ ಉಪಾಧ್ಯಕ್ಷ ರಾಜರಾಮ್ ನಾಗರಕಟ್ಟೆ, ಪ್ರಧಾನ ಕಾರ್ಯದರ್ಶಿ ಸುದರ್ಶನ್ ಎಂ ಉಪಸ್ಥಿತರಿದ್ದರು.

ಯತಿರಾಜ್ ಸ್ವಾಗತಿಸಿದರು. ರೋಟರಿ ಟೆಂಪಲ್ ಟೌನ್ ಅಧ್ಯಕ್ಷ ಹರೀಶ್ ಎಂ.ಕೆ ನಿರೂಪಿಸಿದರು. ಲಕ್ಷ್ಮಣ ಪೂಜಾರಿ ವಂದಿಸಿದರು.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top