ಗೋ ಹತ್ಯೆ: ಮೂವರ ಬಂಧನ‌

Picture of RB NEWS

RB NEWS

Bureau Report

ಗೋ ಹತ್ಯೆ: ಮೂವರ ಬಂಧನ‌

ಬಂಟ್ವಾಳ : ತುಂಬೆ ಗ್ರಾಮದಲ್ಲಿ ಆಗಸ್ಟ್ 14ರಂದು ನಡೆದ ಗೋ ಹತ್ಯೆ ಪ್ರಕರಣಕ್ಕೆ  ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಉಳ್ಳಾಲ ಚೆಂಬುಗುಡ್ಡೆಯ ಇರ್ಷಾದ್ (34), ಮಂಗಳೂರಿನ ಕುದ್ರೋಳಿಯ ಮೊಹಮ್ಮದ್ ಮನ್ಸೂರ್ (48) ಮತ್ತು ಮಂಗಳೂರಿನ ಕಣ್ಣೂರಿನ ಅಬ್ದುಲ್ ಅಝೀಮ್ (18) ಎಂದು ಗುರುತಿಸಲಾಗಿದೆ.


ಆರೋಪಿಗಳು ತುಂಬೆ ಬಳಿ ಜಾನುವಾರು ಕಳವು ಮಾಡಿದ್ದು, ಮರುದಿನ ಹತ್ಯೆಗೈದ ಜಾನುವಾರುಗಳ ಅವಶೇಷಗಳು ಪತ್ತೆಯಾಗಿವೆ. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ಸಂಖ್ಯೆ 125/2025, ಸೆಕ್ಷನ್ 303(2), ಬಿಎನ್‌ಎಸ್, ಕರ್ನಾಟಕ ಗೋಹತ್ಯೆ ತಡೆ ಮತ್ತು ಸಂರಕ್ಷಣಾ ಕಾಯ್ದೆ-2020ರ ಸೆಕ್ಷನ್ 4 ಮತ್ತು 12 ಹಾಗೂ ಪ್ರಾಣಿ ಹಿಂಸೆ ತಡೆ ಕಾಯ್ದೆಯ ಸೆಕ್ಷನ್ 11(ಡಿ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಪೊಲೀಸರು ಪ್ರಕರಣದ ತನಿಖೆ ಮುಂದುವರೆಸಿದ್ದಾರೆ.

ವಿಚಾರಣೆ ವೇಳೆ ಇದೇ ಆರೋಪಿಗಳು ಸೆಪ್ಟೆಂಬರ್ 4ರಂದು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಮತ್ತೊಂದು ಗೋಹತ್ಯೆ ಪ್ರಕರಣದಲ್ಲೂ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ.

ಆ ಪ್ರಕರಣದ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top