300ಕ್ಕೂ ಹೆಚ್ಚು ಬ್ಯಾಂಕ್ ಖಾತೆ, 250ಕ್ಕೂ ಹೆಚ್ಚು ಸಿಮ್ ಕಾರ್ಡ್ ಬಳಸಿದ್ದ ಆರೋಪಿ ಅರೆಸ್ಟ್!

Picture of RB NEWS

RB NEWS

Bureau Report

ಮಂಗಳೂರಿನ ಸೆನ್ ಪೊಲೀಸ್ ಠಾಣೆಯ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಸೈಬರ್ ವಂಚನೆಯ ಆರೋಪಿಯನ್ನು ಹೆಡೆಮುರಿ ಕಟ್ಟಿದ್ದಾರೆ.

ಮಂಗಳೂರು ನಗರ ಪೊಲೀಸ್ ಕಮೀಷನರ್ ಸುಧೀರ್ ರೆಡ್ಡಿಯವರ ಸದ್ದಿಲ್ಲದ ಕಾರ್ಯಾಚರಣೆಗಳಲ್ಲಿ ಈ ಪ್ರಕರಣದ ಪತ್ತೆಕಾರ್ಯವಂತೂ ವಿಶೇಷ ಅಭಿನಂದನೆಗೆ ಪಾತ್ರವಾಗಿದೆ. ಜೊತೆಗೆ ಸೆನ್ ಪೊಲೀಸ್ ಅಧಿಕಾರಿಗಳೂ ಪ್ರಶಂಸಾರ್ಹರು. ಅಭಿನಂದನೆಗಳು


ಮಂಗಳೂರು: ಇಲ್ಲಿನ ಸೆನ್ ಪೊಲೀಸ್ ಠಾಣೆಯ ಪೊಲೀಸರು ಸೈಬರ್ ವಂಚನೆ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸೈಬರ್ ವಂಚನೆ ಪ್ರಕರಣದಲ್ಲಿ ಮಹತ್ವದ ಕಾರ್ಯಾಚರಣೆ ನಡೆಸಿರುವ ಮಂಗಳೂರು ಪೊಲೀಸರು, 300ಕ್ಕೂ ಹೆಚ್ಚು ಬ್ಯಾಂಕ್ ಖಾತೆ ಹಾಗೂ 250ಕ್ಕೂ ಹೆಚ್ಚು ಸಿಮ್ ಬಳಸಿದ್ದ ಆರೋಪಿಯನ್ನು ಬಂಧಿಸಿದ್ದಾರೆ.
ಮಾಂಗ್ಟೆ ರಿಯಲ್ ಕೋಮ್ (Hmngte Reail kom) ಯಾನೆ ಮಾಂಗ್ಟೆ ಅಮೋಶ್ (Mangte amosh) ಬಂಧಿತ ಆರೋಪಿ. ಈತ 300ಕ್ಕೂ ಹೆಚ್ಚು ಬ್ಯಾಂಕ್ ಖಾತೆಗಳನ್ನು ಹಾಗೂ 250ಕ್ಕೂ ಹೆಚ್ಚು ಸಿಮ್ ಕಾರ್ಡ್ ಗಳನ್ನು ಸೈಬ‌ರ್ ವಂಚನೆಗೆ ಬಳಕೆ ಮಾಡಿರುವುದು ಕಂಡುಬಂದಿದೆ. ಆರೋಪಿಯಿಂದ 8 ಮೊಬೈಲ್ ಫೋನ್ , 20 ವಿವಿಧ ಬ್ಯಾಂಕ್ ಗಳ ಡೆಬಿಟ್ ಕಾರ್ಡ್ ಗಳು, 18 ವಿವಿಧ ಬ್ಯಾಂಕ್ ಗಳ ಪಾಸ್ ಬುಕ್ ಗಳು, 11 ವಿವಿಧ ಬ್ಯಾಂಕ್ ಗಳ ಚೆಕ್ ಬುಕ್ ಹಾಗೂ 7ಸಿಮ್ ಕಾರ್ಡ್ ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.
ಯಾರೋ ಅಪಚಿರಿತ ವ್ಯಕ್ತಿಯು ಇನ್ನೋರ್ವ ವ್ಯಕ್ತಿಯೊಬ್ಬರಿಗೆ ಕಸ್ಟಮ್ ಅಧಿಕಾರಿಗಳ ಹೆಸರಿನಲ್ಲಿ ಹಂತ ಹಂತವಾಗಿ ಒಟ್ಟು 7,27,000/- ಹಣವನ್ನು ಪಡೆದು ವಂಚನೆ ಮಾಡಿದ್ದಾರೆ ಎಂಬ ದೂರಿನ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಪ್ರಕರಣದ ತನಿಖೆ ಕೈಗೊಳ್ಳಲಾಗಿತ್ತು. ಈ ಪ್ರಕರಣದಲ್ಲಿ ತ್ರಿಪುರ ರಾಜ್ಯದ 27 ವರ್ಷ ವಯಸ್ಸಿನ ದಾಮೆಂಜಾಯ್ ರಿಯಾಂಗ್ (Damenjoy Reang)ನನ್ನು ಮೊದಲು ಬಂಧಿಸಲಾಗಿತ್ತು. ನಂತರ ಮಾಂಗ್ಟೆ ರಿಯಲ್ ಕೋಮ್ (33)ನನ್ನು ಬಂಧಿಸಲಾದೆ. ಈ ಪ್ರಕರಣದಲ್ಲಿ ಹಣ ವರ್ಗಾವಣೆಯಾಗಿರುವ ಬ್ಯಾಂಕ್ ಖಾತೆಗಳ ವಿವರಗಳನ್ನು ಪಡೆದುಕೊಂಡು ಅದನ್ನು ಪರಿಶೀಲಿಸಿ ಬ್ಯಾಂಕ್ ಖಾತೆದಾರನಾದ ದಾಮೆಂಜಾಯ್ ರಿಯಾಂಗ್ ನನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿತ್ತು.

ಕೃಪೆ: ಈ ಟಿವಿ ಭಾರತ

ಚಿತ್ರ: ಸುಧೀರ್ ಕುಮಾರ್ ರೆಡ್ಡಿ ಐ. ಪಿ. ಎಸ್

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top