ಅಳಿವಿನಂಚಿನಲ್ಲಿರುವ ಪಕ್ಷಿ ಸಂಕುಲ ಉಳಿವಿಗಾಗಿ ಗುಬ್ಬಚ್ಚಿಗೂಡಿನಿಂದ 364 ನೇ ಕಾರ್ಯಾಗಾರ

Picture of RB NEWS

RB NEWS

Bureau Report

ಕಾರ್ಕಳ : ಅಳಿವಿನಂಚಿನಲ್ಲಿರುವ ಪಕ್ಷಿ ಸಂಕುಲಗಳ ಉಳಿವಿಗೆ ಗುಬ್ಬಚ್ಚಿಗೂಡು ಸಸ್ಯ ರಾಶಿಗಳ ಮಹತ್ವ ಜಾಗೃತಿ ಕಾರ್ಯಾಗಾರವು‌ ಪಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.

ಗುಬ್ಬಚ್ಚಿಗೂಡು ಜಾಗೃತಿ ಅಭಿಯಾನದ ರೂವಾರಿ ನಿತ್ಯಾನಂದ ಶೆಟ್ಟಿ ಮಾತನಾಡಿ, ಪಕ್ಷಿ ಸಂರಕ್ಷಣೆ ನಮ್ಮೆಲ್ಲರ ಹೊಣೆ ಅಂದರು.

ಗುಬ್ಬಚ್ಚಿಗೂಡು ಜಾಗೃತಿ ಅಭಿಯಾನದ ಸಂಚಾಲಕಿ ರಮ್ಯ, ವಿದ್ಯಾರ್ಥಿಗಳೊಂದಿಗೆ ಸಂವಾದವ ನಡೆಸಿ ಪಕ್ಷಿಗಳಿಗೆ ನೀರು ಮತ್ತು ಆಹಾರ ಹಾಗೂ ಕೃತಕ ಗೂಡುಗಳನ್ನು ಇಡುವಾಗ ವಹಿಸಬೇಕಾದ ಜವಾಬ್ದಾರಿಗಳನ್ನು ವಿವರಿಸಿದರು.

ಇದು ಗುಬ್ಬಚ್ಚಿಗೂಡಿನಿಂದ ಉಚಿತವಾಗಿ ನಡೆದ 364 ನೇ ಕಾರ್ಯಾಗಾರವಾಗಿದೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top